ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021 ನೇ ವರ್ಷದ ಪುಸ್ತಕ ಬಹುಮಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.


COMMERCIAL BREAK
SCROLL TO CONTINUE READING

ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2021ರ ಜನೆವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ ಎಂದು ಮುದ್ರಿತವಾಗಿರಬೇಕು. ಮರುಮುದ್ರಣವಾದ ಪುಸ್ತಕಗಳು, ಪಠ್ಯಪುಸ್ತಕಗಳು, ಪಿ.ಎಚ್.ಡಿ ಪದವಿಗಾಗಿ ಸಂಶೋಧಿಸಿದ ಗ್ರಂಥ ಮತ್ತಿತರ ಕೃತಿಗಳು ಬಹುಮಾನಕ್ಕಾಗಿ ಪರಿಗಣಿಸಲ್ಪಡುವದಿಲ್ಲ.


ಇದನ್ನೂ ಓದಿ: Pension Scheme : ಸರ್ಕಾರದ ಈ ಯೋಜನೆಯಲ್ಲಿ ಪಡೆಯಿರಿ ₹60,000 ಪಿಂಚಣಿ!


ಪ್ರಕಟವಾದ ಪುಸ್ತಕಗಳ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು 560002 ಇವರಿಗೆ ರಿಜಿಸ್ಟರ್ಡ್ ಅಂಚೆ ಹಾಗೂ ಕೊರಿಯರ್ ಮೂಲಕ ಅಥವಾ ಖುದ್ದಾಗಿ 2022ರ ಜೂನ್ 15 ರೊಳಗಾಗಿ  ತಲುಪಿಸಬೇಕು.‘ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ’


ಬಹುಮಾನಕ್ಕಾಗಿ ಕಳುಹಿಸುವ ಕೃತಿಯ ಮೇಲೆ ಯಾವ ಸಾಹಿತ್ಯ ಪ್ರಕಾರಕ್ಕೆ ಸೇರಿರುತ್ತದೆ ಎಂಬುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ 080-22211730, 22106460 ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ರಿಜಿಸ್ಟ್ರಾರ್ ಎನ್.ಕರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.