ಬೆಂಗಳೂರು : 2020-21 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ಖುದ್ದಾಗಿ ಗೂಗಲ್ ಪ್ಲೇಸ್ಟೋರ್‍ನಿಂದ “ರೈತರ ಬೆಳೆ ಸಮೀಕ್ಷೆ 2020-21 ಆ್ಯಪ್” ಡೌನ್‍ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕು.


COMMERCIAL BREAK
SCROLL TO CONTINUE READING

ಬೆಳೆ ಸಮೀಕ್ಷೆ ಆ್ಯಪ್ ದಾಖಲಿಸುವಿಕೆಗೆ ರೈತರಿಗೆ ಕೊನೆಯ ಅವಕಾಶ..!


ವಿವರಗಳನ್ನು ದಾಖಲಿಸುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆ ಸಾಲ ಪಡೆಯುವಲ್ಲಿ ಅನುಕೂಲವಾಗುತ್ತದೆ. ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ರೈತರು ಬೆಳೆ ವಿವರಗಳನ್ನು ದಾಖಲಿಸದೇ ಇದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ  ಇರುವುದರಿಂದ ತುರ್ತಾಗಿ ವಿವರಗಳನ್ನು ದಾಖಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ರೈತರೇ ಸ್ವಯಂ ದಾಖಲಿಸುವ ಬೆಳೆ ಸಮೀಕ್ಷೆಯ ನೂತನ ಯೋಜನೆ ಇಲ್ಲಿದೆ ..!


ಹೆಚ್ಚಿನ ಮಾಹಿತಿಗಾಗಿ ರೈತರು ಕಂದಾಯ, ಕೃಷಿ, ತೋಟಗಾರಿಕೆ ಅಥವಾ ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ