ವಿದ್ಯುತ್ ಮಗ್ಗ ಕಾರ್ಮಿಕರಿಗೆ ಆರ್ಥಿಕ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಕೋವಿಡ್-19 ಹಿನ್ನೆಲೆ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಯ ಆರ್ಥಿಕ_ಪರಿಹಾರ ನೀಡುತ್ತಿದ್ದು, ಅರ್ಹರಿಂದ ಅರ್ಜಿಆಹ್ವಾನಿಸಲಾಗಿದೆ.ವಿದ್ಯುತ್ ಮಗ್ಗ ಕಾರ್ಮಿಕರಿಗೆ ಒಂದು ಬಾರಿಯ ಆರ್ಥಿಕ ಪರಿಹಾರ ಸಲುವಾಗಿ ಎರಡುಸಾವಿರ ರೂ.ಗಳ ನೆರವನ್ನು ನೀಡಲು ನೇಕಾರ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ.

Last Updated : Jul 29, 2020, 05:48 PM IST
ವಿದ್ಯುತ್ ಮಗ್ಗ ಕಾರ್ಮಿಕರಿಗೆ ಆರ್ಥಿಕ ಪರಿಹಾರಕ್ಕಾಗಿ ಅರ್ಜಿ ಆಹ್ವಾನ  title=
ಸಾಂದರ್ಭಿಕ ಚಿತ್ರ

ಬೆಂಗಳೂರು : ಕೋವಿಡ್-19 ಹಿನ್ನೆಲೆ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಯ ಆರ್ಥಿಕ_ಪರಿಹಾರ ನೀಡುತ್ತಿದ್ದು, ಅರ್ಹರಿಂದ ಅರ್ಜಿಆಹ್ವಾನಿಸಲಾಗಿದೆ.ವಿದ್ಯುತ್ ಮಗ್ಗ ಕಾರ್ಮಿಕರಿಗೆ ಒಂದು ಬಾರಿಯ ಆರ್ಥಿಕ ಪರಿಹಾರ ಸಲುವಾಗಿ ಎರಡುಸಾವಿರ ರೂ.ಗಳ ನೆರವನ್ನು ನೀಡಲು ನೇಕಾರ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ನರ್ಸ್, ಫಾರ್ಮಸಿಸ್ಟ್ ಹಾಗೂ ಲ್ಯಾಬ್ ಟೆಕ್ನಿಷಿಯನ್ ಸೇರಿ 49 ಹುದ್ದೆಗಳಿಗೆ ನೇರ ಸಂದರ್ಶನ

ಈ ಯೋಜನೆಯಡಿ ವಿದ್ಯುತ್ ಮಗ್ಗ ನೇಕಾರರ ನೆರವನ್ನು ಪಡೆದುಕೊಳ್ಳಲು ಘಟಕದ ಮಾಲೀಕರು ರೂ.20 ರ ಬಾಂಡ್ ಪೇಪರ್‌ನಲ್ಲಿ ಕಾರ್ಮಿಕರ ವಿವರಗಳೊಂದಿಗೆ ಮುಚ್ಚಳಿಕೆ ಪತ್ರ ನೀಡುವುದರ ಜೊತೆಗೆ ಸ್ವಯಂ ದೃಢೀಕರಿಸಿದ ಆಧಾರ್ ಕಾರ್ಡ್ ಪ್ರತಿ, ಆಧಾರ್ ಮಾಹಿತಿಯನ್ನು ಡಿ.ಬಿ.ಟಿ ಗಾಗಿ ಬಳಕೆ ಮಾಡಲು ಕಾರ್ಮಿಕರ ಒಪ್ಪಿಗೆ ಪತ್ರಗಳು, ವಿದ್ಯುತ್ ಮಗ್ಗ ಘಟಕದ ಮುಂದೆ ವಿದ್ಯುತ್ ಮಗ್ಗ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಲಾನುಭವಿಗಳ ಗುಂಪಿನ ಫೋಟೋ, ಘಟಕದ ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್.ನಂ. ನ ವಿದ್ಯುತ್ ಬಿಲ್, ಘಟಕವು ಬಾಡಿಗೆ ಅಥವಾ ಲೀಸ್ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದರೆ ದಾಖಲಾತಿಯನ್ನು ಒದಗಿಸುವುದು, ಘಟಕದ ಉದ್ಯೋಗ ಆಧಾರ್ / ಪಿ.ಎಂ.ಟಿ / ಉದ್ದಿಮೆದಾರರ ಪರವಾನಿಗೆ ಪತ್ರದ ಪ್ರತಿ, ಘಟಕದಲ್ಲಿ ಕಾರ್ಯನಿರ್ವಹಿಸುವ ಕೂಲಿ ನೇಕಾರರ ವಿವರಗಳನ್ನು ಒಳಗೊಂಡ ಮಜೂರಿ ಪಾವತಿಯ ಪ್ರತಿ (ಲಭ್ಯವಿದ್ದಲ್ಲಿ) ಹಾಗೂ ಇತರೆ ದಾಖಲಾತಿಗಳೊಂದಿಗೆ ರಾಜ್ಯ ಸರ್ಕಾರದ ಸೇವಾ ಸಿಂಧು ಆನ್‌ಲೈನ್ ಪೋರ್ಟಲ್ ಮೂಲಕ ಆಗಸ್ಟ್ 10 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಅಶೋಕ ಸರ್ಕಲ್ ಹತ್ತಿರ ಕೊಪ್ಪಳ ವಿಳಾಸಕ್ಕೆ ಅಥವಾ ಕಚೇರಿ ದೂರವಾಣಿ ಸಂಖ್ಯೆ: 08539_230069 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News