ಬೆಂಗಳೂರು: ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2021-22ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕಲಾವಿದರಿಗೆ ಧನಸಹಾಯ ನೀಡಲಾಗುತ್ತಿದ್ದು, ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಶಿವಮೊಗ್ಗ ರಂಗಾಯಣದಲ್ಲಿ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭ


ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ, ಅಸಂಘಟಿತ ತಂಡಗಳು, ಏಕವ್ಯಕ್ತಿ ಕಲಾವಿದರಿಗೆ ವಾದ್ಯ ಪರಿಕರ, ವೇಷ ಭೂಷಣ ಖರೀದಿಗೆ ಧನಸಹಾಯ ಮತ್ತು ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನಸಹಾಯ ನೀಡಲಾಗುತ್ತದೆ.


ಇದನ್ನೂ ಓದಿ : Basavaraj Bommai : 'ರಾಜ್ಯದಲ್ಲಿ ಯಾವುದೇ ಲಾಕ್‌ಡೌನ್ ಹೆರುವ ಯೋಚನೆಯೆ ಇಲ್ಲ'


ಆಸಕ್ತರು ಮೇಲಿನ ಮೂರು ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್  Sevasindhu.karnataka.gov.in ರಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಕೆ ನಿಗದಿಪಡಿಸಿದ್ದ ಅವಧಿಯನ್ನು ಜನವರಿ 15 ರವರೆಗೆ ವಿಸ್ತರಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ 9380206704, 8088304855, ಕಚೇರಿ ದೂ.ಸಂ: 08539-221417 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.