ಬೆಂಗಳೂರು: ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳಲ್ಲಿ ನಿರಂತರ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ, ಅಸಂಘಟಿತ ತಂಡಗಳು/ಏಕವ್ಯಕ್ತಿ ಕಲಾವಿದರಿಗೆ ವಾದ್ಯಪರಿಕರ/ವೇಷಭೂಷಣ ಖರೀದಿಗೆ ಹಾಗೂ ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ/ತಂಡ ಕಲಾವಿದರುಗಳಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯ ನೀಡಲಾಗುತ್ತಿದ್ದು, ಆರ್ಹ ಆಸಕ್ತರಿಂದ ಸೇವಾಸಿಂಧು ಮುಖಾಂತರ ಅರ್ಜಿ ಆಹ್ವಾನಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ವಿರೋಧಿ ಸರ್ಕಾರ- ಸಿದ್ಧರಾಮಯ್ಯ


ಆಸಕ್ತರು www.kannadasiri.karnataka.gov.in   ಮುಖಾಂತರ savasindhu.karnataka.gov.in  ರಲ್ಲಿ ದಿ: 08/01/2022 ರೊಳಗಾಗಿ ಅರ್ಜಿ ಸಲ್ಲಿಸುವುದು.ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9380206704/ 8088304855 ಗಳನ್ನು ಹಾಗೂ ಆಯಾ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.