ಬೆಂಗಳೂರು:  ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಮತ್ತು ಮೈಸೂರಿನÀ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಜಂಟಿಯಾಗಿ ಕನ್ನಡ ಬಾರದ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಂದ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನಿಸಿದೆ.  


COMMERCIAL BREAK
SCROLL TO CONTINUE READING

ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗಿನ ಅವರ ಕಚೇರಿ ಗೈರು ಹಾಜರಿಯನ್ನು ಅನ್ಯ ಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು.  ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿಯಿದೆ.
    
ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ಸಹ ವಿಸ್ತರಿಸಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುಬೇಕು ಹಾಗೂ ವಯೋಮಿತಿ 18 ರಿಂದ 50 ವಯಸ್ಸಿನ ಒಳಗಿರಬೇಕು.  ಆಸಕ್ತರು ಭರ್ತಿಮಾಡಿದ ಅರ್ಜಿಯ ಜೊತೆಯಲ್ಲಿ ರೂ. 250/- ಡಿಮ್ಯಾಂಡ್ ಡ್ರಾಫ್ಟ್‍ನ್ನು ಕಳುಹಿಸಿ ಕೊಡಬೇಕು.  ನೋಂದಯಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು.  ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.


33ನೇ ತಂಡದ ತರಬೇತಿಯು ನವೆಂಬರ 01 ರಿಂದ ಆರಂಭವಾಗುತ್ತದೆ.  ಅರ್ಜಿ ನಮೂನೆ ಮತ್ತು ತರೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು – 570 006 ದೂ.ಸಂ. 0821-2345128 ಇವರಿಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದು. 


ಭರ್ತಿಮಾಡಿದ ಅರ್ಜಿಗಳು ಪ್ರಭಾರಿ ಅಧಿಕಾರಿಯವರಿಗೆ ಅಕ್ಟೋಬರ್ 31 ಒಳಗೆ ತಲುಪಬೇಕು ಎಂದು ಪ್ರಕಟಣೆ ತಿಳಿಸಿದೆ. ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಜಂಟಿಯಾಗಿ ನವೆಂಬರ್ 01, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ.  


ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೊಂದಾಯಿಸಿಕೊಳ್ಳಬಹುದು.  ನೊಂದಣಿತರು ಶುಲ್ಕವನ್ನು ಕೊಡಬೇಕಾಗಿಲ್ಲ.