ಬೆಂಗಳೂರು: ಪ್ರತಿ ವರ್ಷ ಮಾರ್ಚ 8 ರಂದು ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕಾರು ಅಪಘಾತ: ಮೋದಿ ಸಹೋದರನ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು


2022-23 ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು 5 ವರ್ಷಗಳಿಂದ ಅವಿರತವಾಗಿ ಮಹಿಳೆಯರಿಗಾಗಿ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ವೀರಮಹಿಳೆ ಪ್ರಶಸ್ತಿ ನೀಡಲಾಗುತ್ತಿದೆ.


ಇದನ್ನೂ ಓದಿ: ಕಾರು ಹಾಗೂ ಬೈಕ್ ಮಧ್ಯೆ ಡಿಕ್ಕಿ, ಸ್ಥಳದಲ್ಲಿಯೇ ಮೂವರ ಸಾವು


ಅರ್ಹ ವ್ಯಕ್ತಿ ಹಾಗೂ ಸಂಸ್ಥೆಯವರು ಧಾರವಾಡ ಜಿಲ್ಲಾ ಬಾಲಭವನದಲ್ಲಿ ಅರ್ಜಿ ಪಡೆದು ಜನೆವರಿ 15 ಸಂಜೆ 5:30 ಗಂಟೆಯೋಳಗಾಗಿ ಸಲ್ಲಿಬೇಕು. ಹೆಚ್ಚಿನ ಮಾಹಿತಿಗಾಗಿ 0836-2447850 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.