ಬೆಂಗಳೂರು: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ, ಕಿರುಸಾಲ, ಸ್ವ-ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆಗಳ ಅನುಷ್ಠಾನಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : IIT-Bombay Placement: ಮೊದಲ ದಿನದಂದೇ 2.05 ಕೋಟಿ ರೂ ಪ್ಯಾಕೇಜ್ ನೀಡಿದ Uber


ಕಳೆದ ಸಾಲಿನಲ್ಲಿ ಈಗಾಗಲೇ ಅರಿವು ಶೈಕ್ಷಣಿಕ ಸಾಲ ನವೀಕರಣಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ (2,3,4ನೇ ಕಂತುಗಳು) ಸುವಿಧಾ ತಂತ್ರಾಂಶದಲ್ಲಿ https://suvidha.karnataka.gov.in ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕಿರುಸಾಲ, ಸ್ವ-ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆಗಳಡಿ ಆಪ್‌ಲೈನ್ ಮೂಲಕ ನೇರವಾಗಿ ಜಿಲ್ಲಾ ವ್ಯವಸ್ಥಾಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.


ಇದನ್ನೂ ಓದಿ : OMG: ಈ ಸ್ವೆಟರ್ ಬೆಲೆ 30 ಲಕ್ಷ ರೂಪಾಯಿಯಂತೆ, ಅಂಥದ್ದೇನಿದೆ ಇದರಲ್ಲಿ?


ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಿ ಅಥವಾ ನಿಗಮದ ವೆಬ್‌ಸೈಟ್ https://ambigaradevelopment.karnataka.gov.in ನಲ್ಲಿ ಅರ್ಜಿ ನಮೂನೆ ಮತ್ತು ವಿವರ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯದಾಖಲಾತಿಗಳೊಂದಿಗೆ 2022ರ ಜನವರಿ 10ರ ಸಂಜೆ 5.30 ರೊಳಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಸಲ್ಲಿಸಬೇಕು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.