ಬೆಂಗಳೂರು: 2020-21 ನೇ ಸಾಲಿಗೆ  ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber ets, Amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ ಅಥವಾ ಅರೆಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ) ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ 25 ಸಾವಿರ ರೂ.ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು. ಈ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಮನೆಯಲ್ಲಿ ಆರ್ಥಿಕ ಸಮಸ್ಯೆಯೇ? ಹಾಗಿದ್ರೆ ಪ್ರತಿ ಸೋಮವಾರ ಈ ಕೆಲಸ ಮಾಡಿ


ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.ಈ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು, ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಅಲ್ಲದೆ ನಿಗಮದ ವೆಬ್‍ಸೈಟ್ www.dbcdc.karnataka.gov.in ಇಲ್ಲಿ ಪಡೆಯಬಹುದಾಗಿರುತ್ತದೆ.


ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಅಥವಾ ದಾಖಲಾತಿಗಳೊಂದಿಗೆ ಆನ್‍ಲೈನ್ ಅಥವಾ ಆಫ್‍ಲೈನ್ ಮೂಲಕ್ ಡಿಸೆಂಬರ್ 19 ರೊಳಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್  www.dbcdc.karnataka.gov.in ಸಂಪರ್ಕಿಸಬಹುದು ಎಂದು ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.