ರಾಯಚೂರು: ಇಲ್ಲಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ವೃತ್ತಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. 


COMMERCIAL BREAK
SCROLL TO CONTINUE READING

ತರಬೇತಿ: ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ 30ದಿನಗಳು, ಮಹಿಳೆಯರಿಗಾಗಿ ಹೊಲಿಗೆ ತರಬೇತಿ  (Training) 30 ದಿನಗಳು, ಮಹಿಳೆಯರಿಗಾಗಿ ಸೌಂದರ್ಯ ವರ್ಧಕಕಲೆ (ಬ್ಯೂಟಿ ಪಾರ್ಲರ್) 30ದಿನಗಳ ವರಗೆ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ, ವಸತಿಯೊಂದಿಗೆ ತರಬೇತಿ ನೀಡಲಾಗಿವುದು.


ಇದನ್ನೂ ಓದಿ: ವೈದ್ಯಕೀಯ ಉಪಕರಣಗಳ ಖರೀದಿ ಹಗರಣ: ಡಿಸಿಎಂ ಅಶ್ವತ್ ನಾರಾಯಣ್ ರಾಜಿನಾಮೆಗೆ AAP ಆಗ್ರಹ


ಧಾಖಲಾತಿಗಳು: ಆಧಾರ್ ಕಾರ್ಡ್, ಪಡಿತರ ಚೀಟಿ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ-4
ಹತ್ತನೇ ತರಗತಿ ವ್ಯಾಸಂಗ ಮಾಡಿರುವ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದೇ ಮಾ.10ರೊಳಗಾಗಿ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.