ಬೆಂಗಳೂರು: 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ www.bcwd.karnataka.gov.in ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ-ಪ್ರವರ್ಗ-1, ಎಸ್.ಸಿ. & ಎಸ್.ಟಿ ರೂ.2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನವಾಗಿದೆ.


ಅರ್ಜಿ ಸಲ್ಲಿಸಲು ತಾಂತ್ರಿಕ ಅಡಚಣೆಗಳಾದಲ್ಲಿ bcwd.hostels@karnataka.gov.in ಗೆ ಇಮೇಲ್ ಮುಖಾಂತರ ಹಾಗೂ ಜಿಲ್ಲಾ ಅಥವಾ ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ದೂ.ಸಂಖ್ಯೆ 080-8050370006 ಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G


iOS Link - https://apple.co/3loQYe
 
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.