ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

2021-22 ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಮಂಜೂರು ಮಾಡಲು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (ಎಸ್.ಎಸ್.ಪಿ)ನಲ್ಲಿ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿರುತ್ತದೆ.

Written by - Zee Kannada News Desk | Last Updated : Nov 9, 2021, 03:23 AM IST
  • 2021-22 ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಮಂಜೂರು ಮಾಡಲು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (ಎಸ್.ಎಸ್.ಪಿ)ನಲ್ಲಿ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿರುತ್ತದೆ.
ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: 2021-22 ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಮಂಜೂರು ಮಾಡಲು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (ಎಸ್.ಎಸ್.ಪಿ)ನಲ್ಲಿ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿರುತ್ತದೆ.

ಇದನ್ನೂ ಓದಿ: India vs Namibia: ನಮೀಬಿಯಾ ವಿರುದ್ಧದ ಗೆಲುವಿನೊಂದಿಗೆ T20I ನಾಯಕತ್ವಕ್ಕೆ ಕೊಹ್ಲಿ ವಿದಾಯ

2021-22 ನೇ ಸಾಲಿನಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ (Post-Matric Scholarship) ವಿದ್ಯಾರ್ಥಿಗಳು ಆನ್‍ಲೈನ್ ಅರ್ಜಿ ಸಲ್ಲಿಸುವುದು. ಹಾಗೂ ಹಿಂದಿನ ವರ್ಷದಲ್ಲಿ ಎಸ್.ಎಸ್.ಪಿ ಮೂಲಕ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಲಾಗಿನ್ ಆಗಿ ಇ-ದೃಢೀಕರಣ ಹಂತದವರೆಗೆ ಅರ್ಜಿಯನ್ನು ಸಲ್ಲಿಸಿ ಕಾಲೇಜಿನ ಇ-ದೃಢೀಕರಣ ಅಧಿಕಾರಿಗಳಿಂದ ತಮ್ಮ ದಾಖಲೆಗಳನ್ನು ಇ-ದೃಢೀಕರಣ ಮಾಡಿ ಮತ್ತು ಇ-ದೃಢೀಕರಣ ಐಡಿಯನ್ನು ಪಡೆಯಬೇಕು. ನಂತರ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಲಾಗಿನ್ ಆಗಿ ಇ-ದೃಢೀಕರಣ ಐಡಿಗಳನ್ನು ನಮೂದಿಸಿ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಇದನ್ನೂ ಓದಿ:"ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಹೋರಾಟದ ಮನೋಭಾವ ಮತ್ತು ಉತ್ಸಾಹವನ್ನು ತಂದಿದ್ದಾರೆ"

ಇದುವರೆಗೆ ಆನ್‍ಲೈನ್ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಅರ್ಜಿ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆಯ ವೆಬ್ ವಿಳಾಸವಾದ www.sw.kar.nic.in ನ್ನು ಪ್ರವೇಶಿಸಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ 2021-22 (ಇ-ದೃಢೀಕರಣ ಪೋರ್ಟಲ್)ನ್ನು ಆಯ್ದುಕೊಂಡು ಅರ್ಜಿ ಸಲ್ಲಿಸಬೇಕು.

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಪಡೆಯಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಆದ್ದರಿಂದ ಕೂಡಲೇ ನಿಮ್ಮ ಬ್ಯಾಂಕಿಗೆ ಭೇಟಿ ನೀಡಿ ನಿಮ್ಮ ಆಧಾರನ್ನು NPCI ಗೆ ಜೋಡಣೆ ಮಾಡಿಸಿ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News