ಗುತ್ತಿಗೆ ಆಧಾರದ ಮೇಲೆ ಆರೋಗ್ಯ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹೆಚ್ಚಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಈಗ ಹಲವು ಆರೋಗ್ಯ ಸಿಬ್ಬಂಧಿ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Last Updated : Jul 23, 2020, 09:49 PM IST
ಗುತ್ತಿಗೆ ಆಧಾರದ ಮೇಲೆ ಆರೋಗ್ಯ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಹೆಚ್ಚಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಈಗ ಹಲವು ಆರೋಗ್ಯ ಸಿಬ್ಬಂಧಿ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ಅಥವಾ ನೇರ ನೇಮಕಾತಿ ಮುಖೇನ ಹುದ್ದೆಗಳು ಭರ್ತಿಯಾಗುವವರೆಗೆ ನೇರ ಸಂದರ್ಶನ ನಿಯಮಗಳನ್ನು ಅನುಸರಿಸಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ಶುಶ್ರೂಷಕರು 95 ಹುದ್ದೆ, ಪ್ರಯೋಗ ಶಾಲಾ ತಂತ್ರಜ್ಞರು 12 ಹುದ್ದೆ ಮತ್ತು ಫಾರ್ಮಾಸಿಸ್ಟ್ 11 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ನೇರ ನೇಮಕಾತಿಗೆ ಹಾಜರಾಗುವ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಕೋಲಾರ ಇಲ್ಲಿಗೆ ತಮ್ಮ ಬಯೋಡೇಟ ಮತ್ತು ಮೂಲ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ (Walk-in-Interview) ಜುಲೈ 28 ರಂದು ಬೆಳಿಗ್ಗೆ 11.00 ಗಂಟೆಗೆ ಹಾಜರಾಗಬೇಕು. ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

Trending News