ಕರ್ನಾಟಕ ಪಬ್ಲಿಕ್ ಶಾಲೆಗೆ ಪೂರ್ವ ಪ್ರಾಥಮಿಕ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

2020-21ನೇ ಸಾಲಿನಲ್ಲಿ ಚಾಮರಾಜನಗರ ತಾಲೂಕಿನ ಚಂದಕವಾಡಿಯ ಕರ್ನಾಟಕ ಪಬ್ಲಿಕ್ ಶಾಲೆಯಗೆ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ತರಗತಿಗೆ ಓರ್ವ ಶಿಕ್ಷಕ, ಶಿಕ್ಷಕಿಯನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

Last Updated : Jul 12, 2020, 05:43 PM IST
ಕರ್ನಾಟಕ ಪಬ್ಲಿಕ್ ಶಾಲೆಗೆ ಪೂರ್ವ ಪ್ರಾಥಮಿಕ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: 2020-21ನೇ ಸಾಲಿನಲ್ಲಿ ಚಾಮರಾಜನಗರ ತಾಲೂಕಿನ ಚಂದಕವಾಡಿಯ ಕರ್ನಾಟಕ ಪಬ್ಲಿಕ್ ಶಾಲೆಯಗೆ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ತರಗತಿಗೆ ಓರ್ವ ಶಿಕ್ಷಕ, ಶಿಕ್ಷಕಿಯನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಪಿ.ಯು.ಸಿ ಯಲ್ಲಿ ಕನಿಷ್ಟ ಶೇಕಡ 50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಎನ್.ಸಿ.ಟಿ.ಇ. ಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೊಮಾ ಇನ್ ನರ್ಸರಿ ಟೀಚರ್ಸ್ ಎಜುಕೇಷನ್ ಪ್ರೋಗ್ರಾಂ (ಡಿ.ಇ.ಸಿ.ಇಡಿ), ಬಿ.ಇಡಿ (ನರ್ಸರಿ) ಅಥವಾ ಡಿ.ಇಡಿ ತರಬೇತಿ ಹೊಂದಿರಬೇಕು. 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.

ಜುಲೈ 15 ರೊಳಗೆ ಅರ್ಜಿ ಸಲ್ಲಿಸಬೇಕು. ಜುಲೈ 16ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 96631946901, 90718085522, 9141897919 ಅನ್ನು ಸಂಪರ್ಕಿಸುವಂತೆ ಚಂದಕವಾಡಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೊಂದೆಡೆ  ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ತರಗತಿಗೆ ಓರ್ವ ಶಿಕ್ಷಕ, ಶಿಕ್ಷಕಿಯನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಜುಲೈ 14 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ. ನಂ 9972657245, 9972962224, 9945651701 ಅನ್ನು ಸಂಪರ್ಕಿಸುವಂತೆ ಹಂಗಳ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News