ಅಲ್ಪಸಂಖ್ಯಾತರ ಬಿ.ಎಡ್ ಹಾಗೂ ಡಿ.ಎಡ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
2020-21 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ಬಿ.ಎಡ್ ಹಾಗೂ ಡಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: 2020-21 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ಬಿ.ಎಡ್ ಹಾಗೂ ಡಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಸ್ಕಾಲರ್‍ಶಿಪ್...!
ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್) ವಿದ್ಯಾರ್ಥಿಗಳು ಜಿಲ್ಲಾ ಕಚೇರಿಯಿಂದ ಅರ್ಜಿಯನ್ನು ಪಡೆದುಕೊಂಡು ನಿಬಂಧನೆಗಳಿಗೊಳಪಟ್ಟು ಭರ್ತಿ ಮಾಡಿದ ಅರ್ಜಿಗಳನ್ನು ಖುದ್ದಾಗಿ ಅಭ್ಯರ್ಥಿಗಳೇ ಹಾಜರಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿಗೆ ಡಿಸೆಂಬರ್ 15, 2020 ರಂದು ಸಂಜೆ 4 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಕಾನೂನು ಪದವಿಧರರಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ https://dom.Karnataka.gov.in ವೆಬ್‍ಸೈಟ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಸಂಪರ್ಕಿಸಿಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.