ಸಫಾಯಿ ಕರ್ಮಚಾರಿಗಳಿಗೊಸ್ಕರ ವಿವಿಧ ಯೋಜನೆಗಳಿಗಾಗಿ ಅರ್ಜಿ ಅಹ್ವಾನ
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿಗಾಗಿ ವಿವಿಧ ಯೋಜನೆಗಳಡಿ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಬೆಂಗಳೂರು : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿಗಾಗಿ ವಿವಿಧ ಯೋಜನೆಗಳಡಿ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಇದನ್ನೂ ಓದಿ : ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆಯೇ ಇಮ್ರಾನ್ ಖಾನ್ ಬಗ್ಗೆ ಸಿಧು ನೀಡಿದ ಹೇಳಿಕೆ?
ಕರ್ಮಚಾರಿ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಮತ್ತು ಪೌರಕಾರ್ಮಿಕರುಗಳಿಗಾಗಿ ಸಕ್ಕಿಂಗ್ ಮತ್ತು ಸೆಟ್ಟಿಂಗ್ ಯಂತ್ರ ಖರೀದಿಸಲು ಹಾಗೂ 9 ರಿಂದ 12 ತರಗತಿ ಓದುತ್ತಿರುವ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಲ್ಯಾಪ್‍ಟಾಪ್ ವಿತರಣೆಗೆ ಮತ್ತು ಸಫಾಯಿ ಕರ್ಮಚಾರಿ ಮಹಿಳೆಯರಿಗೆ ದ್ವೀಚಕ್ರವಾಹನ ನೀಡುವ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15, 2021 ಕೊನೆಯ ದಿನವಾಗಿದೆ.
ಆಸಕ್ತರು www.ksskdc.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 08362447151 ಗೆ ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : Viral Video: ಜಿಮ್‌ನಲ್ಲಿ ಗೆಳತಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಹೆಂಡತಿಗೆ ಸಿಕ್ಕಿಬಿದ್ದ ಪತಿರಾಯ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ