ಬೆಂಗಳೂರು: ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾಸಿರಿ ಯೋಜನೆಯಡಿ ನೀಡುವ ಸಹಾಯಧನ ಯೋಜನೆಯನ್ನು ಜನವರಿ  10 ನೇ ತಾರೀಖಿನವರೆಗೆ ವಿಸ್ತರಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ: ದೆಹಲಿಯಲ್ಲಿ ಈಗ ಮೂರನೇ ಕೊರೊನಾ ಅಲೆ ಜಾರಿಯಲ್ಲಿದೆ- ಸತ್ಯೆಂದರ್ ಜೈನ್


ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೇ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ, ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ಪ್ರತಿ ತಿಂಗಳಿಗೆ 1,500/- ರಂತೆ ಶೈಕ್ಷಣಿಕ ಅವಧಿಯ ಅಕ್ಟೋಬರ್-2021 ರಿಂದ ಮಾರ್ಚ್-2021 ರವರೆಗೆ ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಆನ್‍ಲೈನ್ ಮುಖಾಂತರ ಜಮಾ ಮಾಡುವ ಯೋಜನೆಯನ್ನು 2021-22 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗಿದೆ.


ಇದನ್ನೂ ಓದಿ: 'Bulli Bai' app case: ಬುಲ್ಲಿ ಬಾಯಿ ಆ್ಯಪ್ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರೆಷ್ಟು?


ವಿದ್ಯಾರ್ಥಿಗಳು ಸೌಲಭ್ಯವನ್ನು ಪಡೆದುಕೊಳ್ಳಲು ಸೇವಾ ಸಿಂಧು ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಿದ್ದು, ಜನವರಿ 10 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2971590 ಸಂಪರ್ಕಿಸಬೇಕೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.