ಬೆಂಗಳೂರು : ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2019, 2020 ಹಾಗೂ 2021 ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ಕೆ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.


COMMERCIAL BREAK
SCROLL TO CONTINUE READING

ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ: ಆಯ್ಕೆದಾರರಿಗೆ ಸಿಕ್ಕಿದ್ದಾರೆ ಹೊಸ ಹಿಟ್‌ಮ್ಯಾನ್; ಈ ಬ್ಯಾಟ್ಸ್‌ಮನ್ ರೋಹಿತ್‌ಗಿಂತ ಹೆಚ್ಚು ಅಪಾಯಕಾರಿ!


ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕ್ರೀಡೆ, ನೃತ್ಯ, ಸಾಹಿತ್ಯ, ಸಂಗೀತ, ಕರಕುಶಲ, ಚಿತ್ರಕಲೆ, ಬಹುಮುಖ ಪ್ರತಿಭೆ ಹಾಗೂ ನಾಟಕ ಹೀಗೆ 8 ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳು ತಮ್ಮ ಅರ್ಜಿಗಳನ್ನು ಹಾಗೂ ಪುಸ್ತಕಗಳ 4 ಪ್ರತಿಗಳನ್ನು ಮಾರ್ಚ್ 28 ರೊಳಗಾಗಿ ಆಕಾಡೆಮಿಯ ಕೇಂದ್ರ ಕಚೇರಿ ವಿಳಾಸಕ್ಕೆ ತಲುಪುವಂತೆ ಕಳುಹಿಸಬಹುದು. ಈಗಾಗಲೇ ಎರಡು ಬಾರಿ ಪುಸ್ತಕ ಚಂದಿರ ಪ್ರಶಸ್ತಿ ಹಾಗೂ ಬಾಲಗೌರವ ಪ್ರಶಸ್ತಿ ಪಡೆದವರ ಕೃತಿ, ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.


ಇದನ್ನೂ ಓದಿ: IPL 2022 ಗೆ ದಿಡೀರ್ ಎಂಟ್ರಿ ನೀಡಿದ ಅಪಾಯಕಾರಿ ಬೌಲರ್‌!


ಹೆಚ್ಚಿನ ಮಾಹಿತಿಗಾಗಿ, ಯೋಜನಾಧಿಕಾರಿಗಳು ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ ಔಟ್ ಹಿಂಭಾಗ, ಕೆ.ಎಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ ವಿಳಾಸಕ್ಕೆ ಸಂಪರ್ಕಿಸಬಹುದು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.