ರಾಜ್ಯ ಸರಕಾರದಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ 2023ನೇ ಸಾಲಿನ ರಾಜ್ಯ ಸರ್ಕಾರಿ ಅಧಿಕಾರಿ, ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Mar 26, 2023, 12:24 AM IST
  • ರಾಜ್ಯ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯ ನಾಮನಿರ್ದೇಶನವನ್ನು ಕನ್ನಡ ಅಥವಾ ಇಂಗ್ಲೀಶ್ ಭಾಷೆಯಲ್ಲಿ ಸಲ್ಲಿಸಬಹುದಾಗಿದ್ದು.
  • ಕನ್ನಡದಲ್ಲಿ ಸಲ್ಲಿಸಲು ನುಡಿ6.0 ಆವೃತ್ತಿಯನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ.
  • ಈ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಜಿಲ್ಲೆಯ ನೋಡಲ್ ಆಧಿಕಾರಿಯಾದ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಬಹುದು.
ರಾಜ್ಯ ಸರಕಾರದಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ

ಧಾರವಾಡ: ರಾಜ್ಯ ಸರ್ಕಾರದಿಂದ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ 2023ನೇ ಸಾಲಿನ ರಾಜ್ಯ ಸರ್ಕಾರಿ ಅಧಿಕಾರಿ, ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಧಿಕಾರಿಗಳು, ನೌಕರರು ತಮ್ಮ ನಾಮನಿರ್ದೇಶನಗಳನ್ನು ಆನ್‍ಲೈನ್ ವೆಬ್‍ಸೆಟ್ https://sarvothamaawards.karnataka.gov.in ಅಥವಾ https://dparar.karnataka.gov.in ಮೂಲಕ ಮಾಚ್ 31, 2023 ರೋಳಗಾಗಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ

ರಾಜ್ಯ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯ ನಾಮನಿರ್ದೇಶನವನ್ನು ಕನ್ನಡ ಅಥವಾ ಇಂಗ್ಲೀಶ್ ಭಾಷೆಯಲ್ಲಿ ಸಲ್ಲಿಸಬಹುದಾಗಿದ್ದು. ಕನ್ನಡದಲ್ಲಿ ಸಲ್ಲಿಸಲು ನುಡಿ6.0 ಆವೃತ್ತಿಯನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ. ಈ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಜಿಲ್ಲೆಯ ನೋಡಲ್ ಆಧಿಕಾರಿಯಾದ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: "ಯಾರ್ಯಾರೋ ನಾನೇ ಸಿಎಂ ನಾನೇ ಸಿಎಂ ಎಂಬ ಭ್ರಮೆಯಲ್ಲಿದ್ದಾರೆ"

ಅರ್ಜಿದಾರರು ಆನ್ ಲೈನ್‍ದಲ್ಲಿ ಅರ್ಜಿ ಸಲ್ಲಿಸಿದ ನಂತರ ಅದರ ಒಂದು ಪ್ರತಿಯನ್ನು ಈ ಕಾರ್ಯಕ್ರಮದ ನೋಡಲ್ ಅಧಿಕಾರಿಗಳಾದ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯಕ್ಕೆ ಕಛೇರಿ ಸಮಯದಲ್ಲಿ ಸಲ್ಲಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

More Stories

Trending News