ಬೆಂಗಳೂರು: ರಾಜಾರಾಮ್ ಮೋಹನ್ ರಾಯ್ ಗ್ರಂಥಾಲಯ ಪ್ರತಿಷ್ಠಾನ ಕೋಲ್ಕತ್ತಾ, ನಾನ್ ಮ್ಯಾಚಿಂಗ್ ಸ್ಕೀಮ್ ಯೋಜನೆ ಹಾಗೂ ಸಹಾಯಧನ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಗ್ರಂಥಾಲಯ ಸೇವೆ ಒದಗಿಸುತ್ತಿರುವ, ದರ್ಪಣ್ ಪೋರ್ಟಲ್‍ನಲ್ಲಿ ನೋಂದಣಿಯಾಗಿರುವ ಸೇವಾ ಸಂಘ ಸಂಸ್ಥೆಗಳಿಗೆ ಧನ ಸಹಾಯದ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಸ್ಟಾಲಿನ್, ಗಾಂಧಿ, ನೆಹರು...!


ಎನ್.ಜಿ.ಓ. ದರ್ಪಣ್ ಪೋರ್ಟಲ್ ನಲ್ಲಿ ನೋಂದಣಿಯಾಗಿರುವ ನೋಂದಾಯಿತ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಸ್ವಯಂ ಸೇವಾ ಸಂಘ ಸಂಸ್ಥೆಗಳು ನಿಗದಿತ ಅರ್ಜಿ ನಮೂನೆಯನ್ನು ಪಡೆದು ನಮೂನೆಯ ಎಲ್ಲ ಅಂಶಗಳನ್ನು ಪೂರ್ಣವಾಗಿ ಭರ್ತಿ ಮಾಡಿ ಮಾರ್ಚ್ 14 ರೊಳಗೆ  ಉಪನಿರ್ದೇಶಕರು, ನಗರ ಕೇಂದ್ರ ಗ್ರಂಥಾಲಯ (Libraries) ಇವರಿಗೆ ಅರ್ಜಿ ಸಲ್ಲಿಸಬಹುದು.


ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 0836-2442183, 2441683 ಹಾಗೂ ಇಲಾಖಾ ವೆಬ್‍ಸೈಟ್ dpl.karnataka.gov.in, www.karnatakadigitalpubliclibrary.org ಸಂಪರ್ಕಿಸಬಹುದು ಎಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.