ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು 2022 ಮತ್ತು 2023 ನೇ ವರ್ಷದ ‘ಗೌರವ ಪ್ರಶಸ್ತಿ’ ಗೆ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಅರೆಭಾಷೆ ಸಾಹಿತ್ಯ, ಕಲೆ, ಸಂಸ್ಕøತಿ ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರನ್ನು 2022 ಮತ್ತು 2023 ನೇ ವರ್ಷದ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಪ್ರತಿ ವರ್ಷ ಪ್ರತಿಯೊಂದು ಕ್ಷೇತ್ರಕ್ಕೆ ಒಬ್ಬರಂತೆ 3 ಜನ ಸಾಧಕರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.


ಅರ್ಜಿಗಳನ್ನು ಸ್ವತ: ಸಾಧಕರೇ ಸಲ್ಲಿಸಬಹುದು ಅಥವಾ ಸಾಧಕರ ಅಭಿಮಾನಿಗಳು ಶಿಫಾರಸ್ಸುಮಾಡಿ ಅರ್ಜಿ ಸಲ್ಲಿಸಬಹುದು. ಪ್ರಶಸ್ತಿಗೆ ಅರ್ಹರಾಗಿರುವವರ ಕುರಿತಾಗಿ ಹೆಚ್ಚಿನ ಅಥವಾ ವಿಶೇಷ ಮಾಹಿತಿ ಇದ್ದಲ್ಲಿ ಅಕಾಡೆಮಿಗೆ ಒದಗಿಸಬಹುದು.


ಅರ್ಜಿ ಸಲ್ಲಿಸುವವರು ವ್ಯಕ್ತಿ ಪರಿಚಯದ ಜೊತೆ ಎಲ್ಲಾ ಮಾಹಿತಿಯನ್ನು ಅಕಾಡೆಮಿಯ ನಿಗದಿತ ಅರ್ಜಿ ನಮೂನೆಯಲ್ಲಿಯೇ ಕಳುಹಿಸಬೇಕು. ಇದಕ್ಕೆ ಸಂಬಂಧಿಸಿ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿಯ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರ ಹಾಗೂ ದಾಖಲೆಗಳ ಪ್ರತಿಯೊಂದಿಗೆ ಅಕ್ಟೋಬರ್ 10 ರೊಳಗೆ ತಲುಪುವಂತೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು.


ಇದನ್ನೂ ಓದಿ- ಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ 


ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ "ಗೌರವ ಪ್ರಶಸ್ತಿ 2022 ಮತ್ತು 2023 ಯೋಜನೆ" ಎಂದು ಬರೆದು ಅರ್ಜಿ ವಿವರಗಳನ್ನು ಅಧ್ಯಕ್ಷರು/ ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ-ಕೃಪ ಕಟ್ಟಡ, 1ನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ – 571 201 ಈ ವಿಳಾಸಕ್ಕೆ ಕಳುಹಿಸಿಕೊಡುವುದು.


ಅರ್ಜಿ ಸಲ್ಲಿಸಲು ಅಕ್ಟೋಬರ್, 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಯನ್ನು ಅಧ್ಯಕ್ಷರು, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ ದೂ: 08272-223055, ಮೊಬೈಲ್ ಸಂಖ್ಯೆ 6362522677 ಇಲ್ಲಿಂದ ಪಡೆದುಕೊಳ್ಳಬಹುದು ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಕೋರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.