2023-24ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಜಿಲ್ಲೆಯಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ 2023-24ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಆಸಕ್ತ ಮತ್ತು ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ: ಜಿಲ್ಲೆಯಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ 2023-24ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗಾಗಿ ಆಸಕ್ತ ಮತ್ತು ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು 5 ವರ್ಷಗಳಿಂದ ಅವಿರತವಾಗಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ, ಸಾಮಾಜಿಕ ಸೇವೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಇದನ್ನೂ ಓದಿ: ಕನ್ನಡಿಗರು ಬುಲ್ಡೋಜರ್ ರೀತಿ ಹೋರಾಟಕ್ಕೆ ಇಳಿಯುತ್ತಾರೆ : ಡಾ. ಮಹೇಶ್ ಜೋಷಿ
ಆಸಕ್ತ ಮತ್ತು ಅರ್ಹ ವ್ಯಕ್ತಿ ಹಾಗೂ ಸಂಸ್ಥೆಯವರು ಜನವರಿ 10, 2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಬಾಲ ಭವನ ಕಟ್ಟಡ,ಡಿ,ಸಿ,ಕಂಪೌಂಡ, ಧಾರವಾಡ, ದೂರವಾಣಿ ಸಂ: 0836-2447850 ಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ