ಬಳ್ಳಾರಿ: ಕೃಷಿ ಇಲಾಖೆ ವತಿಯಿಂದ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‍ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಉಪ ಕೃಷಿ ನಿರ್ದೇಶಕ ಡಾ.ಎನ್.ಕೆಂಗೇಗೌಡ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಅಧಿಕ ಮಾಡುವ ನಿಟ್ಟಿನಲ್ಲಿ ಮತ್ತು ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು, ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಅನುಷ್ಟಾನ ಮಾಡಲು ಸರ್ಕಾರದ ಆದೇಶವಾಗಿದ್ದು, ಹೈಟೆಕ್ ಹಾರ್ವೆಸ್ಟರ್ ಹಬ್‍ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.


ಹೈಟೆಕ್ ಹಾರ್ವೆಸ್ಟರ್ ಹಬ್‍ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಅoಡಿಡಿiಜoಡಿ ಮಾದರಿಯಲ್ಲಿ ಸ್ಥಾಪಿಸುವುದು. ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್‍ಗಳನ್ನು ಅನುಷ್ಟಾನ ಮಾಡಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾದಾರ ಸಂಸ್ಥೆಗಳು, ವೈಯಕ್ತಿಕ ಫಲಾನುಭವಿಗಳು ಹಾಗೂ ನೊಂದಾಯಿತ ಸಂಘ ಸಂಸ್ಥೆಗಳು (ಎಫ್‍ಪಿಒ ಗಳನ್ನೊಳಗೊಂಡಂತೆ) ಭಾಗವಹಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ನಮ್ಮನ್ನ ಕರೆದಿಲ್ಲ.


ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ (ಗರಿಷ್ಟ ರೂ.40 ಲಕ್ಷ ಸಹಾಯಧನ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೈತರಿಗೆ ಗರಿಷ್ಠ ಶೇ.70ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ ಎಫ್‍ಪಿಒ ಗಳನ್ನೊಳಗೊಂಡಂತೆ) ಗರಿಷ್ಠ ಶೇ.70 ರಂತೆ (ಗರಿಷ್ಟ ರೂ.50 ಲಕ್ಷ) ಸಹಾಯಧನ ಪಡೆಯಲು ಅವಕಾಶವಿದೆ.


ಸಂಘ-ಸಂಸ್ಥೆಗಳು (ಎಫ್‍ಪಿಒ ಗಳನ್ನೊಳಗೊಂಡಂತೆ), ಟ್ರಸ್ಟ್‍ಗಳು ಮಾತ್ರ ಕಂಬೈಂಡ್ ಹಾರ್ವೆಸ್ಟರ್ ಮತ್ತು ಶುಗರ್ ಕೇನ್ ಹಾರ್ವೆಸ್ಟರ್ ಗಳನ್ನು ಒಳಗೊಂಡ “ಕೋಂಬೋ ಹಾರ್ವೆಸ್ಟರ್ ಹಬ್” ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಕೃಷಿ ಯಂತ್ರೋಪಕರಣವಾರು ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಈ ಸಹಾಯಧನವನ್ನು “ಅಡಿeಜiಣ ಐiಟಿಞeಜ ಃಚಿಛಿಞ ಇಟಿಜeಜ Subsiಜಥಿ” ಮುಖಾಂತರ ಬಿಡುಗಡೆ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳು/ಸಂಘ-ಸಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿದೆ.


ಸಹಕಾರ ಸಂಘಗಳ ನಿಬಂಧನೆಯಂತೆ, ಕಂಪನಿ ಕಾಯ್ದೆಯಡಿ ನೊಂದಾಯಿಸಿದ ಸಂಘ-ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತವೆ. ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳ ಕೃಷಿ ಯಂತ್ರೋಪಕರಣಗಳ ಬ್ಯಾಂಕ್, ರೈತ ಉತ್ಪಾದಕ ಸಂಸ್ಥೆಗಳು ಮತ್ತು ಇತರೆ ಸಂಘ-ಸಂಸ್ಥೆಗಳು ರಾಜ್ಯಾದ್ಯಂತ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ ಎಂದೂ ಉಪ ಕೃಷಿ ನಿರ್ದೇಶಕ ಡಾ.ಎನ್.ಕೆಂಗೇಗೌಡ ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಚಿಂತನೆ 


ಆರು ಅಥವಾ ಒಂಬತ್ತು ವರ್ಷಗಳ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ತಪಾಸಣೆಯಲ್ಲಿ ಸಂಪೂರ್ಣವಾಗಿ ಲೆಕ್ಕ-ಪತ್ರ ಹಾಗೂ ಯಂತ್ರೋಪಕರಣಗಳನ್ನು ಹಾಜರುಪಡಿಸಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬೇಕು.


ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ಮೇಲ್ಕಂಡ ಎಲ್ಲಾ ಅಂಶಗಳನ್ವಯ ಪರಿಶೀಲಿಸಿ ಸಂಬಂಧಿಸಿದ ಉಪ ಕೃಷಿ ನಿರ್ದೇಶಕರ ಮುಖಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.