ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ, ವಸತಿ ರಹಿತ ನಿವೇಶನ (ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ ನಿರ್ಮಾಣ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಮೊದಲ ಬಜೆಟ್: ಆರ್ಥಿಕ ಮುಗ್ಗಟ್ಟಿನ ಮದ್ಯೆ ಆಯವ್ಯಯ! ಯಾವ ಯೋಜನೆಗಳಿಗೆ ಆದ್ಯತೆ?


ಆಫ್‌ಲೈನ್ ಅರ್ಜಿಯನ್ನು ಸಲ್ಲಿಸುವವರು ನಿಗಮದ ಆಯಾ ಜಿಲ್ಲಾ ಕಛೇರಿಗಳಲ್ಲಿ ಅರ್ಜಿ ನಮೂನೆಯನ್ನು ಪಡೆದು ಫೆಬ್ರವರಿ 25 ರೊಳಗೆ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಫೆ. 07 ರಿಂದ ಆರಂಭವಾಗಲಿದ್ದು, ಆನ್‌ಲೈನ್ ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನವಾಗಿದೆ.


ಫಲಾನುಭವಿಗಳು ಅರ್ಜಿಯೊಂದಿಗೆ ಇತ್ತೀಚಿನ ಪಾಸ್ ಫೋರ್ಟ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್, ನಿರಾಪೇಕ್ಷಣಾ ಪತ್ರ, ಖಾತೆ, ಸೈಟ್/ನಿವೇಶನಕ್ಕೆ ಸಂಬಂಧ ಪಟ್ಟ ದಾಖಲಾತಿಗಳನ್ನು ಸಲ್ಲಿಸಬೇಕು.


ಇದನ್ನೂ ಓದಿ-Relationship Tips: ನಿಮ್ಮ ಸಂಗಾತಿಗೆ ಅಪ್ಪಿ-ತಪ್ಪಿಯೂ ಕೂಡ ಈ ಸಿಕ್ರೆಟ್ ಹೇಳಬೇಡಿ, ಇಲ್ದಿದ್ರೆ..?


18 ವರ್ಷ ಮೇಲ್ಪಟ್ಟ ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ, ಕನಿಷ್ಟ 15 ವರ್ಷದಿಂದ ಕರ್ನಾಟಕದಲ್ಲಿಯೇ ನೆಲೆಸಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್: www.karnataka.gov.in/kmvstdcl ದೂ.ಸಂ: 08539-221176 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.