ಧಾರವಾಡ : ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 2024 ನೇ ಸಾಲಿನ “ಸಾವಯವ ಕೃಷಿಗಾಗಿ ತೋಟಗಾರಿಕೆ” ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳವನ್ನು ಫೆಬ್ರವರಿ 10 ರಿಂದ 12 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.


COMMERCIAL BREAK
SCROLL TO CONTINUE READING

ಈ ಮೇಳದಲ್ಲಿ ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ರೈತರಿಗೆ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ, ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಿಂದ ಒಬ್ಬ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆಯನ್ನು ಆಯ್ಕೆ ಮಾಡಿ ಬಹುಮಾನದೊಂದಿಗೆ ಪ್ರಶಸ್ತಿಯೊಂದಿಗೆ ಸನ್ಮಾನಿಸಲಾಗುವುದು.


ಪ್ರಶಸ್ತಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದ ಯಾವುದೇ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಮತ್ತು ಐಸಿಎಆರ್ ಪ್ರಶಸ್ತಿಗಳನ್ನು ತಮ್ಮ ಹಾಗೂ ತಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಪಡೆದಿರಬಾರದು.ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಧಾರವಾಡ ಜಿಲ್ಲೆಯ ರೈತ, ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕರು ಅಥವಾ ಮುಖ್ಯಸ್ಥರು, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಕುಂಬಾಪುರ ಫಾರ್ಮ, ಧಾರವಾಡದಲ್ಲಿ ಪಡೆಯಬಹುದು ಅಥವಾ ತೋಟಗಾರಿಕೆ ವಿವಿಯ ವೆಬ್‍ಸೈಟ್: www.uhsbagalkot.karnataka.gov.in ಮೂಲಕ ಕೂಡ ಪಡೆದುಕೊಳ್ಳಬಹುದು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 10, 2024 ರ ಒಳಗಾಗಿ ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕರು, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ, ಪಿ. ಬಿ. ರಸ್ತೆ, ಕುಂಬಾಪುರ ಫಾರ್ಮ, ಧಾರವಾಡ – 580005 ಗೆ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ 9482709079 ಅಥವಾ 9448637946, 9449872863 ಗೆ ಸಂಪರ್ಕಿಸಬಹುದು ಎಂದು ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ