ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ

2023-24 ನೇ ಸಾಲಿಗಾಗಿ ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ.

Written by - Manjunath Naragund | Last Updated : Sep 7, 2023, 04:49 AM IST
  • ಎಲ್ಲಾ ವರ್ಗದ ರೈತರಿಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ವಯ 2 ಹೆಕ್ಟೇರ್ ಮೇಲ್ಪಟ್ಟು 5 ಹೆಕ್ಟೇರ್ ವರೆಗೂ ಶೇ.45 ರಷ್ಟು ಸಹಾಯಧನ ನೀಡಲಾಗುವುದು.
  • ಕಂದಾಯ ಇಲಾಖೆಯಿಂದ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ title=

ಧಾರವಾಡ : 2023-24 ನೇ ಸಾಲಿಗಾಗಿ ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಶೇ.90 ರಷ್ಟು ಸಹಾಯಧನ ನೀಡಲಾಗುವುದು. ಇತರೆ ರೈತರಿಗೆ 2 ಹೆಕ್ಟೇರ್ ವರೆಗೆ ಶೇ.75 ರಷ್ಟು ಸಹಾಯಧನ ನೀಡಲಾಗುವುದು. ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವುದು.

ಇದನ್ನೂ ಓದಿ: ರಮ್ಯಾ ಸಾವಿನ ಸುದ್ದಿ ಸುಳ್ಳು : ಸ್ಯಾಂಡಲ್‌ವುಡ್‌ ಕ್ವೀನ್‌ ಜಿನೀವಾದಲ್ಲಿ ಕ್ಷೇಮ

ಎಲ್ಲಾ ವರ್ಗದ ರೈತರಿಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ವಯ 2 ಹೆಕ್ಟೇರ್ ಮೇಲ್ಪಟ್ಟು 5 ಹೆಕ್ಟೇರ್ ವರೆಗೂ ಶೇ.45 ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರಾಗಿದ್ದಲ್ಲಿ ಕಂದಾಯ ಇಲಾಖೆಯಿಂದ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ಮೊದಲು, ತಾಲೂಕಾ ತೋಟಗಾರಿಕೆ ಕಛೇರಿಯಲ್ಲಿ ಹೆಸರು ನೊಂದಾಯಿಸಿ ಕಾರ್ಯದೇಶ ಪಡೆಯಬೇಕು. ಕಾರ್ಯದೇಶ ಪಡೆಯದೇ ಅಳವಡಿಸಿಕೊಂಡಲ್ಲಿ ಸಹಾಯಧನಕ್ಕೆ ಪರಿಗಣಿಸಲಾಗುವುದಿಲ್ಲ.

ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದೇನು?

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News