ಬಳ್ಳಾರಿ: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ “ಪೌಷ್ಠಿಕ ಆಹಾರ” ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶ ಕೆ.ಹೆಚ್.ವಿಜಯಕುಮಾರ್ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ “ಪೌಷ್ಠಿಕ ಆಹಾರ” ಪಡೆಯುವುದಕ್ಕಾಗಿ ಆಯ್ಕೆಯಾದ ಫಲಾನುವಿಗಳ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.


ಇದನ್ನೂ ಓದಿ: ಮೆಜೆಸ್ಟಿಕ್‌ನಲ್ಲಿದ್ದ ನಂದಿನಿ ಬೂತ್‌ಗಳ ತೆರವು; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!


ಈ ಯೋಜನೆಯಲ್ಲಿ ಕೆಲವು ಬದಲಾವಣೆಯಾಗಿದ್ದು, ಪ್ರಸ್ತುತ ಮಾತೃ ವಂದನಾ ಯೋಜನೆಯಡಿ ಮೊದಲ ಎರಡು ಜೀವಂತ ಮಕ್ಕಳಿಗೆ ಈ ಯೋಜನೆಯ ಪ್ರಯೋಜನ ಲಭ್ಯವಾಗುತ್ತದೆ. ಆದರೆ ಎರಡನೇ ಮಗುವು ಹೆಣ್ಣು ಮಗುವಾಗಿರಬೇಕು. ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ.5000/-ಗಳನ್ನು ನೀಡಲಾಗುವುದು. ಮೊದಲನೇಯ ಕಂತು ರೂ.3000/-ಗಳನ್ನು ಗರ್ಭಿಣಿ ಎಂದು ಅಂಗನವಾಡಿ ಕೇಂದ್ರದಲ್ಲಿ ನೋಂದಣಿ (150 ದಿನಗಳ ಒಳಗಾಗಿ), ಎರಡನೇ ಕಂತು ರೂ.2000/-ಗಳನ್ನು ಮಗುವಿನ ಜನನ ನೋಂದಣಿ ಹಾಗೂ 3ನೇ ಪೆಂಟಾ ಪೂರ್ಣಗೊಂಡ ನಂತರ ನೀಡಲಾಗುತ್ತದೆ.


ಎರಡನೇ ಹೆಣ್ಣು ಮಗು ಜನನಿಸಿದರೆ ಒಂದೇ ಕಂತಿನಲ್ಲಿ ರೂ.6000/-ಗಳನ್ನು ನೀಡಲಾಗುವುದು. ಎರಡನೇ ಮಗುವಿಗೆ ಪ್ರಯೋಜನಗಳನ್ನು ಪಡೆಯುವುದಕ್ಕಾಗಿ ಗರ್ಭಿಣಿ ಅವಧಿಯಲ್ಲಿ ಅಂಗನವಾಡಿ ಕೇಂದ್ರದಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದ್ದಾರೆ.


ಸಹಾಯ ಧನವನ್ನು ನೇರ ನಗದು ವರ್ಗಾವಣೆ(ಡಿಬಿಟಿ) ಮೂಲಕ ಫಲಾನುಭವಿಯ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು.


ದಾಖಲೆಗಳು:


ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್ (ತಾಯಿ ಕಾರ್ಡ್) ಪ್ರತಿ. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಒಂದು ನಕಲು ಪ್ರತಿ, ಅರ್ಜಿ ನಮೂನೆಗಳು ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ದೊರೆಯುತ್ತವೆ.


ಇದನ್ನೂ ಓದಿ: ಈ ಕ್ರಿಕೆಟಿಗನ ಪ್ರೀತಿ ನಂಬಿ 30ನೇ ವಯಸ್ಸಿಗೆ ಮದುವೆಯಾಗದೆ ಗರ್ಭಿಣಿಯಾದ ನಟಿ..!


ಅರ್ಹ ಫಲಾನುಭವಿಗಳು ಹತ್ತಿರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು ಅಥವಾ ಸ್ವಯಂ ಫಲಾನುಭವಿಯ ಫೆÇೀರ್ಟಲ್ (citizen login): http://pmmvy.wed.gov.in ಪೆÇೀರ್ಟಲ್‍ನ ಮೂಲಕ ಅರ್ಜಿ ಸಲ್ಲಿಸಬಹುದು.


ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಮಹಿಳಾ ಮೇಲ್ವಿಚಾರಕಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ವಿಜಯ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...


Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.