ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ನಾಳೆಯಿಂದ ಅವಕಾಶ: ಕೊನೆ ದಿನ ಯಾವಾಗ?

Grilahakshmi Yojana: ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಪ್ರಕ್ರಿಯೆ ಬಗ್ಗೆ ವಿವರಿಸಿದರು. “ಆಧಾರ್ ಕಾರ್ಡ್ ಓಟಿಪಿ ನೀಡಬೇಕಾಗುತ್ತದೆ. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ನಂಬರ್ ಬೇಕು. ಉಚಿತವಾಗಿ ಅರ್ಜಿ ಸಲ್ಲಿಸಿ ಮಧ್ಯವರ್ತಿಗಳ ಹಾವಳಿ ಭ್ರಷ್ಟಾಚಾರ ತಪ್ಪಿಸಲು ನೇರವಾಗಿ ಹೋಗಿ ಅರ್ಜಿ ಸಲ್ಲಿಸಿ” ಎಂದರು.

Written by - Prashobh Devanahalli | Edited by - Bhavishya Shetty | Last Updated : Jun 15, 2023, 11:50 AM IST
    • ನಾಳೆಯಿಂದ ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿಗಳಿಂದ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ
    • ಅರ್ಜಿ ಸಲ್ಲಿಕೆಗೆ ಯಾವುದೇ ಫೀಸ್ ಕೊಡುವಂತಿಲ್ಲ ಎಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
    • ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಪ್ರಕ್ರಿಯೆ ಬಗ್ಗೆ ವಿವರಿಸಿದರು.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ನಾಳೆಯಿಂದ ಅವಕಾಶ: ಕೊನೆ ದಿನ ಯಾವಾಗ? title=
Grilahakshmi Yojana

Grilahakshmi Yojana: ಬೆಂಗಳೂರು: ನಾಳೆಯಿಂದ ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿಗಳಿಂದ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ತೆರೆಯಲಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಫೀಸ್ ಕೊಡುವಂತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಇದನ್ನೂ ಓದಿ: “ಕ್ರಿಕೆಟ್’ಗೆ ನಿವೃತ್ತಿ ಘೋಷಿಸಲು ಬಿಸಿಸಿಐ ಮಾಡಿದ ಈ ತಪ್ಪೇ ಕಾರಣ!” ಪಬ್ಲಿಕ್’ನಲ್ಲಿಯೇ ನಿಂದಿಸಿದ ಅಂಬಾಟಿ ರಾಯುಡು

ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಪ್ರಕ್ರಿಯೆ ಬಗ್ಗೆ ವಿವರಿಸಿದರು. “ಆಧಾರ್ ಕಾರ್ಡ್ ಓಟಿಪಿ ನೀಡಬೇಕಾಗುತ್ತದೆ. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ನಂಬರ್ ಬೇಕು. ಉಚಿತವಾಗಿ ಅರ್ಜಿ ಸಲ್ಲಿಸಿ ಮಧ್ಯವರ್ತಿಗಳ ಹಾವಳಿ ಭ್ರಷ್ಟಾಚಾರ ತಪ್ಪಿಸಲು ನೇರವಾಗಿ ಹೋಗಿ ಅರ್ಜಿ ಸಲ್ಲಿಸಿ” ಎಂದರು.

“ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇಟ್ಟಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹತ್ವದ ನಿರ್ಧಾರ ಆಗಿದೆ. ನಮ್ಮ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆ ಗೃಹ ಲಕ್ಷ್ಮಿ ಯೋಜನೆ ಇದಾಗಿದೆ. ಮನೆಯ ಯಜಮಾನಿ ಶಕ್ತಿಶಾಲಿಯಾಗ್ತಾಳೆ ಆಗ ಸಮಾಜದ ಶಕ್ತಿ ವೃದ್ದಿ ಆಗುತ್ತದೆ” ಎಂದರು.

ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗಲಿದೆ. ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಕೆಲವೊಂದು ಕಾರಣಗಳಿಂದ ಜೂನ್ 16ರಿಂದ ಅರ್ಜಿ ಸಲ್ಲಿಸಬಹುದು. ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮೂಲಕ ಭೌತಿಕವಾಗಿ ಕೂಡ ಅರ್ಜಿ ಸಲ್ಲಿಸಬಹುದು. ನಾಳೆ ಮಧ್ಯಾಹ್ನ 1.30ಕ್ಕೆ ಅರ್ಜಿ ಸಲ್ಲಿಕೆಗೆ ಅವಕಾಶ ಇರಲಿದೆ. ಸಾಂಕೇತಿಕವಾಗಿ ಸಿಎಂ ರಿಂದಲೇ ಸೇವಾ ಸಿಂಧು ವೆಬ್ ಲಾಂಚ್ ಮಾಡಲಿದ್ದೇವೆ. ಈ ಸಂದರ್ಭದಲ್ಲಿ ಸಿಎಂ ರಿಂದ ಸಾಂಕೇತಿಕವಾಗಿ ಐದು ಫಲಾನುಭವಿಗಳು ಅರ್ಜಿ ಸಲ್ಲಿಕೆ ಮಾಡಲಾಗುವುದು ಎಂದರು.

ನಾಳೆ ಶಕ್ತಿ ಭವನದಲ್ಲಿ ಸಿಎಂ ರಿಂದ ಸೇವಾ ಸಿಂಧು ವೆಬ್ ಲಾಂಚ್ ಕಾರ್ಯಕ್ರಮ ಇರಲಿದೆ. 1902 ಹೆಲ್ಪ್ ಲೈನ್ ಮೂಲಕ ಏನಾದರೂ ಗೊಂದಲಗಳಿದ್ದರೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ಟ್ಯಾಕ್ಸ್ ಪೇಯರ್ಸ್ ಇದ್ದು ಸುಳ್ಳು ಮಾಹಿತಿ ನೀಡಿದ್ರೆ ಅರ್ಜಿ ರಿಜೆಕ್ಟ್ ಆಗಲಿದೆ. ಸುಳ್ಳು ಮಾಹಿತಿ ನೀಡುವವರ ವಿರುದ್ಧ ಪ್ಲಾನ್ ಮಾಡಿರುವ ಇಲಾಖೆ, ಅರ್ಜಿ ಹಾಕುವ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ರಿಜೆಕ್ಟ್ ಆಗಲಿದೆ ಎಂದು ವಿವರಿಸಿದರು.

ಇದನ್ನೂ ಓದಿ: ʼಕಾಂತಾರʼ ಆಯ್ತು ಈಗ ತ್ರಿವಿಕ್ರಮ ನಿರ್ಮಾಣದ ʼಕರಿಹೈದ ಕೊರಗಜ್ಜʼ ಸಿನಿಮಾ ರೆಡಿ...!

ಇ-ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿದ್ದೇವೆ.ಅರ್ಜಿದಾರರ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ಸ್ವೀಕಾರ ಆಗೋದಿಲ್ಲ. ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News