ಕಾಲುವೆಗಳ ಕೊನೇ ಭಾಗದ ರೈತರ ರಕ್ಷಣೆಗೆ ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ತುಂಗಳ- ಸಾವಳಗಿ ಏತ ನೀರಾವರಿ ಯೋಜನೆಯ ಕೊನೆಯ ಭಾಗಗಳ ರೈತರಿಗೆ ನೀರು ತಲುಪುತ್ತಿಲ್ಲ ಎನ್ನುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ್ದ, ಡಿಸಿಎಂ ನಾಲೆಗಳಿಂದ ಅನೇಕ ಕಡೆ ಶೇ 90 ರಷ್ಟು ನೀರನ್ನು ಪಂಪ್ ಮಾಡಲಾಗುತ್ತಿದೆ. ಸದನ ಒಪ್ಪುವುದಾದರೆ ವಾರದೊಳಗೆ ಬಿಲ್ ತಯಾರು ಮಾಡಲಾಗುವುದು ಎಂದು ಭರವಸೆ ನೀಡಿದ್ದರು.

Written by - Prashobh Devanahalli | Edited by - Krishna N K | Last Updated : Jul 24, 2024, 05:22 PM IST
    • ಕಾಲುವೆಗಳಿಗೆ ಯಾರೂ ಸಹ ಪಂಪ್ ಸೆಟ್ ಗಳನ್ನು ಹಾಕಬಾರದು
    • ಅಕ್ಕಪಕ್ಕದ ರೈತರು ನೀರು ತೆಗೆಯಲು ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು
    • ರೈತರಿಗೆ ನೀರು ಕೊಡುವ ನಾಲೆಗಳ ರಕ್ಷಣೆಗೆ ಈ ಕಾನೂನು ತರಲಾಗಿದೆ
ಕಾಲುವೆಗಳ ಕೊನೇ ಭಾಗದ ರೈತರ ರಕ್ಷಣೆಗೆ ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ title=
DK Shivakumar

ಬೆಂಗಳೂರು : ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಹಾಗೂ ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ತಲುಪಿಸಲು ತಂದಿರುವ ನೀರಾವರಿ ತಿದ್ದುಪಡಿ ಕಾಯ್ದೆ- 2024ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು.

ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, 1964 ರಲ್ಲಿ ಈ ವಿಚಾರದ ಬಗ್ಗೆ ಕಾಯ್ದೆ ಮಾಡಲಾಗಿತ್ತು. ನಂತರ ಯಾವುದೇ ತಿದ್ದುಪಡಿಗಳು ಆಗಿರಲಿಲ್ಲ. ಕಾಲುವೆಗಳಿಗೆ ಯಾರೂ ಸಹ ಪಂಪ್ ಸೆಟ್ ಗಳನ್ನು ಹಾಕಬಾರದು ಹಾಗೂ ಅಕ್ಕಪಕ್ಕದ ರೈತರು ನೀರು ತೆಗೆಯಲು ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು. ನೀರಾವರಿ ವಿಚಾರದಲ್ಲಿ ನಡೆಯುವ ಅಕ್ರಮಗಳ ತೀರ್ಮಾನಕ್ಕೆ ಸೂಪರಿಡೆಂಟ್ ಎಂಜಿನಿಯರ್ ಗೆ ಹಕ್ಕು ನೀಡಲಾಗಿದೆ. ಪ್ರತಿಪಕ್ಷಗಳ ಶಾಸಕರ ಅಭಿಪ್ರಾಯಗಳನ್ನೂ ಸ್ವೀಕರಿಸಲಾಗಿದೆ. ರೈತರಿಗೆ ನೀರು ಕೊಡುವ ನಾಲೆಗಳ ರಕ್ಷಣೆಗೆ ಈ ಕಾನೂನು ತರಲಾಗಿದೆ ಎಂದರು.

ಇದನ್ನೂ ಓದಿ: ಟೀಯೆಸ್ಸಾರ್ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚನೆ

ವಿಧೇಯಕ ಮಂಡನೆ ಬಳಿಕ ಸ್ಪೀಕರ್ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿ ಅನುಮೋದನೆ ನೀಡಿದರು. ಕಳೆದ ಮಂಗಳವಾರ (ಜುಲೈ 16) ಶಾಸಕ ಜಗದೀಶ್ ಶಿವ ಗುಡಗಂಟಿ ಅವರು ತುಂಗಳ- ಸಾವಳಗಿ ಏತ ನೀರಾವರಿ ಯೋಜನೆಯ ಕೊನೆಯ ಭಾಗಗಳ ರೈತರಿಗೆ ನೀರು ತಲುಪುತ್ತಿಲ್ಲ ಎನ್ನುವ ವಿಚಾರವಾಗಿ ಗಮನ ಸೆಳೆದಾಗ ಉತ್ತರಿಸಿದ್ದ ಡಿಸಿಎಂ ಅವರು, ನಾಲೆಗಳಿಂದ ಅನೇಕ ಕಡೆ ಶೇ 90 ರಷ್ಟು ನೀರನ್ನು ಪಂಪ್ ಮಾಡಲಾಗುತ್ತಿದೆ. ಸದನ ಒಪ್ಪುವುದಾದರೆ ವಾರದೊಳಗೆ ಬಿಲ್ ತಯಾರು ಮಾಡಲಾಗುವುದು ಎಂದು ಭರವಸೆ ನೀಡಿದ್ದರು.

ಮಂಡ್ಯ, ಹಾಸನ, ಬಾಗಲಕೋಟೆ ಸೇರಿದಂತೆ ರಾಜ್ಯದ ನೀರಾವರಿ ಪ್ರದೇಶಗಳ ಟೇಲ್ ಎಂಡ್ ಭಾಗಗಳಿಗೆ ನೀರು ತಲುಪುತ್ತಿಲ್ಲ. ಏತ ನೀರಾವರಿ ಮಾಡಿದರೂ ಸಹ ಶೇ 50 ರಷ್ಟು ನೀರು ಸಹ ಹೋಗುತ್ತಿಲ್ಲ. ಎಲ್ಲರೂ ಸಹಕಾರ ಕೊಟ್ಟರೇ ನಾವು ನೀರಿನ ರಕ್ಷಣೆ ಮಾಡಿ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತೆ ಮಾಡುವ ಕಾನೂನು ತರಲಾಗುವುದು ಎಂದು ಡಿಸಿಎಂ ತಿಳಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News