ಬೆಂಗಳೂರು : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು NFAP-Bamboo Mission, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡದ ರೈತರು ಬಿದಿರು ಕೃಷಿಯನ್ನು ಮಾಡಲು ಪ್ರೋತ್ಸಾಹಿಸಲು ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಪರಿಶಿಷ್ಟ ಪಂಗಡದ ರೈತರು ಜಮೀನು ಹೊಂದಿರುವ ಕುರಿತು ಆರ್‌ಟಿಸಿ/ ಅರಣ್ಯ ಹಕ್ಕು ಅಧಿನಿಯಮದಡಿ ಹಕ್ಕು ಪತ್ರ ಹೊಂದಿರಬೇಕು ಹಾಗೂ ಜಾತಿ ಪ್ರಮಾಣ ಪ್ರತವನ್ನು ಸಲ್ಲಿಸಬೇಕು.ಪ್ರತಿ ಎಕರೆಗೆ ಪ್ರತಿ ವರ್ಷ ರೂ. 18,000 ಗಳಂತೆ ಮೂರು ವರ್ಷಗಳ ಕಾಲಾವಧಿಗೆ ಸಹಾಯಧನ ಒದಗಿಸುವ ಕಾರ್ಯಕ್ರಮ ಇದಾಗಿದ್ದು, ಅರ್ಹ ರೈತರು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅರ್ಜಿಗಳನ್ನು ಪಡೆದು, 2022ರ ಫೆಬ್ರವರಿ 05ರೊಳಗೆ ಸಲ್ಲಿಸುವುದು.


ಇದನ್ನೂ ಓದಿ: "ಹಿಂದು-ಮುಸ್ಲಿಂ ಧ್ರುವೀಕರಣ ರಾಜಕೀಯ ಉತ್ತರ ಪ್ರದೇಶದಲ್ಲಿ ನಡೆಯಲ್ಲ"


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:205, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ.: 080-29787448, ಮೊ.ಸಂ.: 9141004587,  ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ ದೂ.ಸಂ.: 27681784, ದೊಡ್ಡಬಳ್ಳಾಪುರ ದೂ.ಸಂ.: 27623681, ಹೊಸಕೋಟೆ ದೂ.ಸಂ.:27931528, ನೆಲಮಂಗಲ ದೂ.ಸಂ.: 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.