`ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ನೀವು ಸಿದ್ಧ ಇದ್ದೀರಾ? `
ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭಾದ ವಿಪಕ್ಷ ನಾಯಕ ಸಿದ್ದರಾಮಯ್ಯನವರ ನಡುವೆ ಸರಣಿ ಟ್ವೀಟ್ ಸಮರ ಈಗ ತಾರಕಕ್ಕೇರಿದೆ.ಈಗ ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ `ನಿತ್ಯ ನನ್ನ ವಿರುದ್ಧ ನಿತ್ಯ ನನ್ನ ವಿರುದ್ದ ನಂಜುಕಾರುತ್ತಿರುವ ಹೆಚ್.ಡಿ. ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ` ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭಾದ ವಿಪಕ್ಷ ನಾಯಕ ಸಿದ್ದರಾಮಯ್ಯನವರ ನಡುವೆ ಸರಣಿ ಟ್ವೀಟ್ ಸಮರ ಈಗ ತಾರಕಕ್ಕೇರಿದೆ.ಈಗ ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ 'ನಿತ್ಯ ನನ್ನ ವಿರುದ್ಧ ನಿತ್ಯ ನನ್ನ ವಿರುದ್ದ ನಂಜುಕಾರುತ್ತಿರುವ ಹೆಚ್.ಡಿ. ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ' ಎಂದು ಪ್ರಶ್ನಿಸಿದ್ದಾರೆ.
'ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ ತಿಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ.ನಿತ್ಯ ನನ್ನ ವಿರುದ್ದ ನಂಜುಕಾರುತ್ತಿರುವ ಹೆಚ್.ಡಿ. ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ.ಕುಮಾರಸ್ವಾಮಿಯವರೇ, ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ.ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: "ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳ ಜತೆ ಅಮಾಯಕರನ್ನೂ ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಇದೆ"
ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ ಹೆಚ್.ಡಿ ದೇವೇಗೌಡರ ಮೇಲೆ ಆಣೆ ಮಾಡಿ ಘೋಷಿಸಲು ಸಿದ್ಧ ಇದ್ದೀರಾ? ಬಿಜೆಪಿ ಜೊತೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನೀವು ಘೋಷಿಸಿಬಿಟ್ಟರೆ ನಿಮ್ಮ ಪಕ್ಷ ಬಿಜೆಪಿಯ 'ಬಿ-ಟೀಮ್' ಎಂಬ ಆರೋಪವನ್ನು ಕೂಡಾ ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ. ನಿಮ್ಮ ಪಕ್ಷದ ಹೆಸರು ಕೂಡಾ ಅರ್ಥಪೂರ್ಣವಾಗುತ್ತದೆ" ಎಂದು ಅವರು ಕುಟುಕಿದ್ದಾರೆ.
ಇದನ್ನೂ ಓದಿ: 'ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?'
'ಗೋಮುಖ ವ್ಯಾಘ್ರರೇ ಸುತ್ತ ಕುಣಿದಾಡುತ್ತಿರುವ ಈ ಸಂದರ್ಭದಲ್ಲಿ ಜನ ಪ್ರತಿಯೊಬ್ಬರನ್ನೂ ಸಂಶಯದಿಂದ ನೋಡುತ್ತಿದ್ದಾರೆ.ಈ ಸಂದರ್ಭದಲ್ಲಿ ನಮ್ಮ ಅಸಲಿ ಮುಖವನ್ನು ಜನರ ಮುಂದೆ ತೆರೆದಿಟ್ಟು ಅವರ ವಿಶ್ವಾಸವನ್ನು ಗಳಿಸಿ ನಮ್ಮ ಹೋರಾಟದಲ್ಲಿ ಅವರನ್ನು ತೊಡಗಿಸಿಕೊಳ್ಳಬೇಕಾಗಿದೆ.ಉಳಿದುದೆಲ್ಲವನ್ನೂ ಪಕ್ಕಕ್ಕಿಟ್ಟು ನನ್ನ ವಿರುದ್ಧದ ವೈಯಕ್ತಿಕ ನಿಂದೆ, ವಿಕೃತ ಮನಸ್ಸಿನ ಹಳಹಳಿಕೆ ಮತ್ತು ಸುಳ್ಳುಗಳಿಂದ ಕೂಡಿದ ಅಭಿಯಾನವನ್ನೇ ನೀವು ಮುಂದುವರಿಸುವುದಾದರೆ ಹಾಗೆಯೇ ಮಾಡಿ.ಸಾರ್ವಜನಿಕ ಜೀವನದಲ್ಲಿರುವ ನಮ್ಮನ್ನು - ನಿಮ್ಮನ್ನು ಜನ ನೋಡಿದ್ದಾರೆ. ಅವರು ತೀರ್ಮಾನಿಸುತ್ತಾರೆ' ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಇದಕ್ಕೂ ಮೊದಲು ಎಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರುತ್ತಾ ನಾಲ್ಕು ಪ್ರಶ್ನೆಗಳನ್ನು ಎತ್ತಿದ್ದರು, ಅದರಲ್ಲಿ
1.ಆಪರೇಷನ್ ಕಮಲಕ್ಕೆ ಸಹಕರಿಸಿದ್ದಕ್ಕೆ ಸಿಕ್ಕ ಪ್ರತಿಫಲವೆಷ್ಟು?
2.ಆ ಪಾಪದ ಹಣವನ್ನು ಏನು ಮಾಡಿದಿರಿ?
3.ಹ್ಯೂಬ್ಲೆಟ್ ವಾಚಿನ ʼಸಿದ್ದರಹಸ್ಯʼವೇನು?
4.ಅರ್ಕಾವತಿ ರೀಡೂ ಬಗ್ಗೆ ಮೌನವೇಕೆ? ಧೈರ್ಯವಿದ್ದರೆ ಉತ್ತರಿಸಿ, ವಿಷಯಾಂತರ ಬೇಡ' ಎನ್ನುವ ಸವಾಲನ್ನು ಕುಮಾರಸ್ವಾಮಿ ಅವರು ಹಾಕಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.