ಡಿ.ಕೆ.ಶಿವಕುಮಾರ್ ಬಂಧನ ನಿಜಕ್ಕೂ ಪ್ರಜಾಪ್ರಭುತ್ವದ ಕಗ್ಗೊಲೆ: ಮಾಜಿ ಸಿಎಂ ಕುಮಾರಸ್ವಾಮಿ

ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದು ನಿಜಕ್ಕೂ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

Written by - Divyashree K | Last Updated : Sep 3, 2019, 10:58 PM IST
ಡಿ.ಕೆ.ಶಿವಕುಮಾರ್ ಬಂಧನ ನಿಜಕ್ಕೂ ಪ್ರಜಾಪ್ರಭುತ್ವದ ಕಗ್ಗೊಲೆ: ಮಾಜಿ ಸಿಎಂ ಕುಮಾರಸ್ವಾಮಿ title=

ಬೆಂಗಳೂರು: ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದು ನಿಜಕ್ಕೂ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದು ರಾಜಕೀಯ ವಲಯದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ಕ್ಷುಲ್ಲಕ ಕಾರಣ ನೀಡಿ ಡಿಕೆಶಿ ಅವರನ್ನು ಬಂಧಿಸಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ಈ ಮೂಲಕ ದೃಢಪಟ್ಟಿದೆ.ಹಬ್ಬದ ಆಚರಣೆಗೂ ಅವಕಾಶ ನೀಡದೆ 4 ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ" ಎಂದು ಎಂದಿದ್ದಾರೆ.

Trending News