POCSO case: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿ!

POCSO Case: ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದಾರೆ ಅಂತಾ ಆರೋಪಿಸಿ ಮಹಿಳೆಯೊಬ್ಬರು ಕಳೆದ ಮಾರ್ಚ್ ತಿಂಗಳಿನಲ್ಲಿ ದೂರು ನೀಡಿದ್ದರು. ಆದರೆ ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು.

Written by - Puttaraj K Alur | Last Updated : Jun 13, 2024, 06:23 PM IST
  • ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ
  • ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪಗೆ ಬಂಧನ ಭೀತಿ
  • ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ
POCSO case: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿ!
BSY ವಿರುದ್ಧ ಜಾಮೀನು ರಹಿತ ವಾರಂಟ್!

POCSO Case: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದೆ. ಯಡಿಯೂರಪ್ಪನವರಿಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದೆ. 

Add Zee News as a Preferred Source

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಯಡಿಯೂರಪ್ಪನವರು ಹಾಜರಾಗದ ಹಿನ್ನೆಲೆ ವಾರಂಟ್ ಹೊರಡಿಸಲು ಪೊಲೀಸರು ಬುಧವಾರ(ಜೂ.12) ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ವಾರಂಟ್​ ಜಾರಿ ಮಾಡಿ ಆದೇಶ ಹೊರಡಿಸಿದೆ. 

ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ರೇಣುಕಾಸ್ವಾಮಿ ಕೊಲೆ ರಹಸ್ಯೆ

ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದಾರೆ ಅಂತಾ ಆರೋಪಿಸಿ ಮಹಿಳೆಯೊಬ್ಬರು ಕಳೆದ ಮಾರ್ಚ್ ತಿಂಗಳಿನಲ್ಲಿ ದೂರು ನೀಡಿದ್ದರು. ಆದರೆ ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪನವರಿಗೆ ನೋಟಿಸ್ ನೀಡಿದ್ದ ಪೊಲೀಸರು, ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. 

ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿದ್ದ ಯಡಿಯೂರಪ್ಪನವರು, ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್​ಗೂ ಉತ್ತರ ನೀಡಿರುವ ಅವರು ಸೋಮವಾರ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ದರ್ಶನ್‌ ಕೊಲೆ ಪ್ರಕರಣ: ಮತ್ತೊಬ್ಬ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌

ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. FIR ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್​​​ 12ರ ವಿಚಾರಣೆ ವೇಳೆ ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಅಂತಾ ಯಡಿಯೂರಪ್ಪನವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ತಮ್ಮ ವಿರುದ್ಧದ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ, ಹೀಗಾಗಿ ಅದನ್ನು ರದ್ದುಪಡಿಸಬೇಕೆಂದು ಅವರು ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News