ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಾ.ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ವತಿಯಿಂದ 2021-22ನೇ ಸಾಲಿನ ರಾಷ್ಟ್ರೀಯ ಯುವ ಪ್ರಶಸ್ತಿಗೆ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 05 ಕೊನೆಯ ದಿನವಾಗಿದೆ.
ಇದನ್ನೂ ಓದಿ: ಏಮ್ಸ್ ಗೆ ದಾಖಲಾದ ಬಂಗಾಳದ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್
ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಲಾವಿದರು ಅರ್ಜಿ ಸಲ್ಲಿಸಬೇಕು. 25 ರಿಂದ 35 ವರ್ಷದ ಒಳಗಿನವರು ವಯಸ್ಸಿನ ದಾಖಲಾತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಕಲಾವಿದರು ಕರ್ನಾಟಕದಲ್ಲಿ ವಾಸವಾಗಿರಬೇಕು. ಕಲಾವಿದರು ತಮ್ಮ ಧ್ವನಿಸುರಳಿಯ ಪ್ರತಿ ಲಗತ್ತಿಸಬೇಕು. ಕಲಾವಿದರು ಸ್ವವಿವರ ಹಾಗೂ ಸಂಗೀತ ಕ್ಷೇತ್ರದ ವಿದ್ಯಾರ್ಹತೆಯ ದಾಖಲೆಗಳನ್ನು ಲಗತ್ತಿಸಬೇಕು.
ಇದನ್ನೂ ಓದಿ: 7th Pay Commission : ಕೇಂದ್ರ ನೌಕರರ ಸಂಬಳದಲ್ಲಿ ಸಿಗಲಿದೆ Double Bonanza! DA ಶೇ.3 ರಷ್ಟು ಮತ್ತು ಬಾಕಿ ಲೆಕ್ಕಾಚಾರ ನೋಡಿ
ಅರ್ಜಿಗಳನ್ನು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ನವೆಂಬರ್ 05 ರೊಳಗಾಗಿ ಸಲ್ಲಿಸಬೇಕು. ಲಕೋಟೆಯ ಮೇಲೆ “ಡಾ.ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಯುವ ಪ್ರಶಸ್ತಿಗಾಗಿ ಅರ್ಜಿ ಎಂದು ನಮೂದಿಸಬೇಕು ಎಂದು ಸದಸ್ಯ ಕಾರ್ಯದರ್ಶಿ ಮಾಧವ ವಿ. ಗಿತ್ತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.