ಬೆಂಗಳೂರು: ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ವಿಜಯ್ ದೇವರಕೊಂಡ ತಂಗಿ ಯಾರು ಗೊತ್ತಾ? ಈಕೆಯೂ ಸ್ಟಾರ್ ನಟಿ! ರಶ್ಮಿಕಾಗಿಂತಲೂ ಸಖತ್ ಸ್ವೀಟ್ ಆಂಡ್ ಕ್ಯೂಟ್ ಈಕೆ


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್‌ ನೀಡಲಾಗುತ್ತಿದೆ. ಟಿಕೆಟ್‌ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್‌ನವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್‌ ಅವರು ಮರಳಿ ಜೈಲಿಗೆ ಹೋಗಬೇಕಿದೆ. ಅವರು ಮತ್ತೆ ಬಿಡುಗಡೆಯಾಗುವುದಿಲ್ಲ ಎಂದರು.


ಅವರು ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್‌ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದರು.


ವಿಧಾನಪರಿಷತ್‌ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕೇಂದ್ರದ ನಾಯಕರು ನಿರ್ಧಾರ ಮಾಡಿದ್ದಾರೆ. ಇದರಲ್ಲಿ ರಾಜ್ಯದ ನಾಯಕರ ಪಾತ್ರವಿಲ್ಲ ಎಂದರು.


ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್‌ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದರು.


ಎಸ್.ಎಂ ಕೃಷ್ಣ ಆರೋಗ್ಯ ವಿಚಾರಣೆ


ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ ವಿಚಾರಿಸಿದರು.


ಇದನ್ನೂ ಓದಿ:  ಕೆಕೆಆರ್ ಆಟಗಾರನ ವಿರುದ್ಧ ಬಿಸಿಸಿಐ ಕ್ರಮ: ಪಂದ್ಯ ಶುಲ್ಕದ ಶೇಕಡಾ 20 ರಷ್ಟು ದಂಡ


ಈ ವೇಳೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ನಮ್ಮ ನಾಡಿನ ಮುತ್ಸದ್ಧಿಯಾಗಿದ್ದು, ದೇವರ ಆಶೀರ್ವಾದ ಇದೆ. ನಾವು ಕೂಡ ಅವರ ಆರೋಗ್ಯಕ್ಕೆ ಪ್ರಾರ್ಥಿಸುತ್ತೇವೆ ಎಂದರು.


<https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ