"ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧರು"

ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧರು. ವಿಪಕ್ಷಗಳಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

Written by - Manjunath N | Last Updated : Jul 18, 2024, 07:35 PM IST
  • 1949 ರ ನವೆಂಬರ್ 25 ರಂದು ಸಂವಿಧಾನ ಸಭೆಯಲ್ಲಿ ಮಾಡಿದ ಭಾಷಣದಲ್ಲಿ, "ಜನವರಿ 26-1950 ಕ್ಕೆ ಸಂವಿಧಾನ ಜಾರಿಗೆ ಬರುತ್ತಿದೆ.
  • ನಾವೆಲ್ಲರೂ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಚರಿತ್ರಾರ್ಹವಾದ ಭಾಷಣದಲ್ಲಿ ಹೇಳಿದ್ದರು.ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದೇವೆ.
  • ಇಲ್ಲಿ ಇನ್ನೂ ಆರ್ಥಿಕವಾಗಿ, ಸಾಮಾಜಿಕವಾಗಿ ಅಸಮಾನತೆ ಉಳಿದುಕೊಂಡಿರುವುದರಿಂದ ಅದನ್ನು ನಿವಾರಣೆ ಮಾಡದಿದ್ದರೆ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆಂಬ ಎಚ್ಚರಿಕೆ ಕೊಟ್ಟಿದ್ದರು
"ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧರು" title=

ಬೆಂಗಳೂರು: ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧರು. ವಿಪಕ್ಷಗಳಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ವಾಲ್ಮಿಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಕುರಿತಾದ ನಿಯಮ‌ 69ರ ಅಡಿಯಲ್ಲಿ ನಡೆದ ಚರ್ಚೆಗೆ ಸದನದಲ್ಲಿ ಅವರು ಪ್ರತಿಕ್ರಿಯಿಸುತ್ತಿದ್ದರು.

ವಾಲ್ಮಿಕಿ ನಿಗಮದ ಪ್ರಕರಣದಲ್ಲಿ ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ.ಮಾಜಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಇವರು ವಿಶೇಷ ತನಿಖಾ ತಂಡವನ್ನು ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ ಎಸ್.ಐ.ಟಿ ಬಗ್ಗೆ ಹೀಗೆ ಹೇಳಿದ್ದೀರಾ? ಎಂಬುದನ್ನು ಅವರಲ್ಲಿ ಕೇಳಬಯಸುತ್ತೇನೆ.ಮೇ 26ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ, ದಲಿತ ಎಂದು ಮಾತನಾಡಿದ್ದಾರೆ ಎಂದು ಹೇಳಿದರು.

ಸಂವಿಧಾನದಲ್ಲಿ ಪರಿಶಿಷ್ಟ ಜಾತಿ/ವರ್ಗ ಎನ್ನುವ ಉಲ್ಲೇಖ ಇದೆ. ಇಬ್ಬರೂ ಸೇರಿ 24.1% ಜನಸಂಖ್ಯೆ ಇದ್ದಾರೆ. ಇವರ ಅಭಿವೃದ್ಧಿ ಆದರೆ ಮಾತ್ರ ಸಮ ಸಮಾಜದ ಆಶಯ ಈಡೇರುತ್ತದೆ. ಈ ಸಮುದಾಯಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಬರುತ್ತದೆ. ಅಸಮಾನತೆ ಇರುವವರೆಗೂ ಸಮಾನತೆ ಸಾಧ್ಯವಿಲ್ಲ. ಸಂವಿಧಾನ ಬಂದು 70 ವರ್ಷ ಆದರೂ ಸಮಾನತೆ ಸಿಕ್ಕಿಲ್ಲ. ಇದನ್ನು ಸರಿಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ವಾಲ್ಮಿಕಿ, ಬೋವಿ, ಆದಿಜಾಂಭವ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಸೇರಿ ಹಲವು ಅಭಿವೃದ್ಧಿ ನಿಗಮಗಳನ್ನು ಆರಂಭಿಸಲಾಗಿದೆ ಎಂದು ಅವರು ವಿವರಿಸಿದರು.

ಈ ಎಲ್ಲಾ ನಿಗಮಗಳ ಉದ್ದೇಶ ಆಯಾ ಸಮುದಾಯಗಳನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿಸುವುದೇ ಆಗಿದೆ.2013ರ ಡಿಸೆಂಬರ್ ನಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆ ಜಾರಿಗೆ ಕೊಟ್ಟಿದ್ದು ನಮ್ಮ‌ ಸರ್ಕಾರ.ಬಜೆಟ್‌ನ 24.1% ಅಭಿವೃದ್ಧಿ ಹಣ ಈ ಸಮುದಾಯದ ಅಭಿವೃದ್ಧಿಗೆ ಮೀಸಲಿಡಬೇಕು ಎಂದು ಕಡ್ಡಾಯ ಮಾಡಿದ್ದು ನಾನು. ವಿಪಕ್ಷಗಳು ಬರೀ ಮೊಸಳೆ ಕಣ್ಣೀರು ಹರಿಸುತ್ತಿವೆ ಎಂದು ಅವರು ಕಿಡಿ ಕಾರಿದರು.

ಇದನ್ನೂ ಓದಿ: ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು :ಇಂದಿನಿಂದ ನಾಲೆಗಳಿಗೆ ನೀರು ಹರಿಸಲು ಸೂಚನೆ

1949 ರ ನವೆಂಬರ್ 25 ರಂದು ಸಂವಿಧಾನ ಸಭೆಯಲ್ಲಿ ಮಾಡಿದ ಭಾಷಣದಲ್ಲಿ, "ಜನವರಿ 26-1950 ಕ್ಕೆ ಸಂವಿಧಾನ ಜಾರಿಗೆ ಬರುತ್ತಿದೆ. ನಾವೆಲ್ಲರೂ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಚರಿತ್ರಾರ್ಹವಾದ ಭಾಷಣದಲ್ಲಿ ಹೇಳಿದ್ದರು.ನಾವು ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದೇವೆ. ಇಲ್ಲಿ ಇನ್ನೂ ಆರ್ಥಿಕವಾಗಿ, ಸಾಮಾಜಿಕವಾಗಿ ಅಸಮಾನತೆ ಉಳಿದುಕೊಂಡಿರುವುದರಿಂದ ಅದನ್ನು ನಿವಾರಣೆ ಮಾಡದಿದ್ದರೆ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆಂಬ ಎಚ್ಚರಿಕೆ ಕೊಟ್ಟಿದ್ದರು ಎಂದು ಅವರು ತಿಳಿಸಿದರು.

ಇದನ್ನೂ ಓದಿ:ಹೊಸ ಮೆಟ್ರೋ ಮಾರ್ಗಗಳು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ: ಡಿಸಿಎಂ

ಇಡೀ ದೇಶದಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆ ತಂದವರು ನಾವು.ಪರಿಶಿಷ್ಠ ಸಮುದಾಯಗಳ ಬಗ್ಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕೇಂದ್ರದ ಬಿಜೆಪಿಯಾಗಲಿ, ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಾಗಲಿ ಈ ಕಾಯ್ದೆಯನ್ನು ಏಕೆ ಜಾರಿಗೆ ತಂದಿಲ್ಲ?ಇಡೀ ದೇಶದಲ್ಲಿ ಕರ್ನಾಟಕ ಮಾತ್ರ ಇಂಥಾ ಪರಿಣಾಮಕಾರಿ ಕಾಯ್ದೆಯನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗಾಗಿ ಜಾರಿ ಮಾಡಿದ್ದೇವೆ.ಗುತ್ತಿಗೆಯಲ್ಲೂ ಎಸ್.ಸಿ / ಎಸ್.ಟಿ ಸಮುದಾಯಗಳಿಗೆ ಮೀಸಲಾತಿ ಜಾರಿ ಮಾಡಿರುವುದು ನಾವು ಮಾತ್ರ. ಇಂಥದ್ದನ್ನು ಬಿಜೆಪಿಯವರು ಇದುವರೆಗೂ ಏಕೆ ಜಾರಿ ಮಾಡಿಲ್ಲ? ಎಸ್.ಸಿ / ಎಸ್.ಟಿ ಉದ್ದಿಮೆಗಳಿಗೆ / ಉದ್ಯಮಗಳಿಗೆ ವಿಶೇಷ ಸಾಲದ ಸವಲತ್ತು , KIADB ಭೂಮಿ ವಿಚಾರದಲ್ಲಿ ಈ ಸಮುದಾಯಗಳಿಗೆ ಅನುಕೂಲ ಮಾಡಿ ಕಾನೂನು ತಂದವರು ನಾವು.ನಾವು ಎಸ್.ಸಿ / ಎಸ್.ಟಿ ಸಮುದಾಯದವರ ವಿರೋಧಿಯಾಗಿದ್ದರೆ ಇಷ್ಟೆಲ್ಲವನ್ನೂ ಜಾರಿ ಮಾಡುತ್ತಿದ್ದೆವಾ? ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧರು. ವಿಪಕ್ಷಗಳಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News