`ನಿಮ್ಮ ತಲೆಗೆ ಹಗರಣಗಳು ಸುತ್ತಿಕೊಂಡ ಕೂಡಲೇ ನಮ್ಮ ಕಾಲದ ಹಗರಣಗಳು ನೆನಪಾಯಿತೇ?`
`ನಿಮ್ಮ ತಲೆಗೆ ಹಗರಣಗಳು ಸುತ್ತಿಕೊಂಡ ಕೂಡಲೇ ನಮ್ಮ ಕಾಲದ ಹಗರಣಗಳು ನೆನಪಾಯಿತೇ?` ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಬೆಂಗಳೂರು: 'ನಿಮ್ಮ ತಲೆಗೆ ಹಗರಣಗಳು ಸುತ್ತಿಕೊಂಡ ಕೂಡಲೇ ನಮ್ಮ ಕಾಲದ ಹಗರಣಗಳು ನೆನಪಾಯಿತೇ?' ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯ ಹಗರಣಗಳನ್ನು ತನಿಖೆಗೆ ಒತ್ತಾಯಿಸಿ ಸಿಎಂಗೆ ಪತ್ರ ಬರೆಯಲಿರುವ ಸಚಿವ ಅಶ್ವಥ್ ನಾರಾಯಣ ಹೇಳಿಕೆಯನ್ನು ಸ್ವಾಗತಿಸುತ್ತೇನೆ, ಇದೇ ರೀತಿ ಪಿಎಸ್ ಐ ನೇಮಕಾತಿ ಹಗರಣದಲ್ಲಿ ಅವರ ಮೇಲಿನ ಆರೋಪಗಳ ಬಗ್ಗೆಯೂ ತನಿಖೆಗೆ ಒತ್ತಾಯಿಸಿ ಪತ್ರ ಬರೆಯಲು ಕೇಳಿಕೊಳ್ಳುತ್ತೇನೆ ಎಂದು ಆಗ್ರಹಿಸಿದ್ದಾರೆ
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷಗಳಾಯಿತು, ನಮ್ಮ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ಈ ಮೂರು ವರ್ಷ ಸಾಕಾಗಲಿಲ್ಲವೇ? ನಿಮ್ಮ ತಲೆಗೆ ಹಗರಣಗಳು ಸುತ್ತಿಕೊಂಡ ಕೂಡಲೇ ನಮ್ಮ ಕಾಲದ ಹಗರಣಗಳು ನೆನಪಾಯಿತೇ? ಎಂದು ಅವರು ಪ್ರಶ್ನಿಸಿದರು.
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ದ ಸಿಎಂಗೆ ದೂರು :ವರ್ಗಾವಣೆಗೆ ಮನವಿ
ಬಿಜೆಪಿ ಸರ್ಕಾರದ ಸಾಲು ಸಾಲು ಹಗರಣಗಳನ್ನು ಬಯಲಿಗೆಳೆಯದಂತೆ ತಡೆಯಲು ನೀವು ಮಾಡುತ್ತಿರುವ ಬೆದರಿಕೆ ರೂಪದ ಆರೋಪಗಳಿಗೆ ನಾವು ಬಗ್ಗುವವರಲ್ಲ. ಈ ರೀತಿಯ ಈ ಬ್ಲಾಕ್ ಮೇಲ್ ತಂತ್ರದಿಂದ ನಮ್ಮ ಬಾಯಿ ಮುಚ್ಚಿಸಬಹುದೆಂದು ತಿಳಿದುಕೊಂಡಿದ್ದರೆ ಅದು ನಿಮ್ಮ ಭ್ರಮೆ ಎಂದು ಟೀಕಿಸಿದರು.
ನಿಮ್ಮ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ತನಿಖೆಗಾಗಿ ಇಡೀ ವಿಧಾನಸೌಧವನ್ನೇ ತನಿಖಾ ಸಂಸ್ಥೆಗಳಿಗೆ ಬಿಟ್ಟುಕೊಡಬೇಕಾಗಬಹುದು.ಸಚಿವರು ಬೇರೇನೂ ಕೆಲಸ ಮಾಡದೆ ತನಿಖಾಧಿಕಾರಿಗಳ ಮುಂದೆ ನಿತ್ಯ ವಿಚಾರಣೆಗೆ ಹಾಜರಿ ಹಾಕಬೇಕಾಗಬಹುದು. ಇದಕ್ಕಿಂತ ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು ಎಂದು ಅವರು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ