ತೀವ್ರ ವಿರೋಧದ ನಡುವೆಯೂ ಕಾಂಗ್ರೆಸ್'ಗೆ ಸೇರ್ಪಡೆಯಾದ ಅಶೋಕ್ ಖೇಣಿ

ಸೋಮವಾರ ಬೆಳಿಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಅಶೋಕ್ ಖೇಣಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

Last Updated : Mar 5, 2018, 07:22 PM IST
ತೀವ್ರ ವಿರೋಧದ ನಡುವೆಯೂ ಕಾಂಗ್ರೆಸ್'ಗೆ ಸೇರ್ಪಡೆಯಾದ ಅಶೋಕ್ ಖೇಣಿ title=

ಬೆಂಗಳೂರು: ನೈಸ್ ಹಗರಣದಲ್ಲಿ ಸಿಲುಕಿದ್ದ ಶಾಸಕ ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬಾರದು ಎಂಬ ಹಲವು ವಿರೋಧಗಳ ನಡುವೆಯೂ ಇಂದು ಬೆಳಿಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಅಶೋಕ್ ಖೇಣಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಬಾವುಟ ನೀಡುವ ಮೂಲಕ ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಇತರ ಮುಖಂಡರು  ಪಾಲ್ಗೊಂಡಿದ್ದರು.

ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಅಶೋಕ್ ಖೇಣಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬಾರದೆಂದು ಧರಂಸಿಂಗ್ ಪುತ್ರ ಅಜಯ್ ಸಿಂಗ್, ಎಸ್.ಟಿ.ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜು ಸೇರಿದಂತೆ ಹಲವರು ಶಾಸಕ ಅಶೋಕ್ ಖೇಣಿ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಶಾಸಕ ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಗೆ ವಿರೋಧ

ಅಲ್ಲದೆ, ಖೇಣಿ ಮೇಲೆ ಖೇಣಿ ವಿರುದ್ಧ ನೈಸ್ ಹಗರಣ, ಭೂ ಹಗರಣ ಸೇರಿದಂತೆ ಹಲವು ಹಗರಣಗಳಿದ್ದು ಅವರು ಕಾಂಗ್ರೆಸ್'ಗೆ ಸೇರ್ಪಡೆಗೊಳ್ಳುವುದರಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೊಂದರೆಯಾಗುತ್ತದೆ ಎಂದು ಆರೋಪಿಸಿ, ಖೇಣಿಯವರನ್ನು ಕಾಂಗ್ರೆಸ್'ನಿಂದ ದೂರ ಉಳಿಸುವಂತೆ ರಾಹುಲ್ ಗಾಂಧಿ ಮತ್ತು ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದರು. 

ಇಷ್ಟಾದರೂ, ಕಾಂಗ್ರೆಸ್ ನಾಯಕರು ಖೇಣಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿರುವುದು ಹಲವು ಚರ್ಚೆಗೆ ಕಾರಣವಾಗಲಿದೆ. ಇದರಿಂದ ಪಕ್ಷಕ್ಕೆ ಸಂಕಟ ಎದುರಾದರೂ ಸಂದೇಹವಿಲ್ಲ. 

Trending News