ತುಮಕೂರು: ವಿಶ್ವದಲ್ಲೇ ಅತಿದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಮ್ಮೆಗೆ ಪಾತ್ರವಾದ ತುಮಕೂರು ಜಿಲ್ಲೆ ಪಾವಗಡದಲ್ಲಿರುವ ಸೋಲಾರ್ ಪಾರ್ಕ್ 'ಶಕ್ತಿ ಸ್ಥಳ'ವನ್ನು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.


COMMERCIAL BREAK
SCROLL TO CONTINUE READING

2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿರುವ ಸೋಲಾರ್ ಪಾರ್ಕ್‍ನಲ್ಲಿ ಮೊದಲ ಹಂತದಲ್ಲಿ 600 ಮೆ,ವ್ಯಾ ವಿದ್ಯುತ್ ಉತ್ಪಾದನೆ ನಡೆಸುವ ಘಟಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು, ಇದು ಎಷ್ಯಾದಲ್ಲಿಯೀ ಅತಿ ದೊಡ್ಡ ಸೌರ ಶಕ್ತಿ ಉತ್ಪಾದನಾ ಕೇಂದ್ರವಾಗಿದ್ದು, ಜಗತ್ತಿನ 8 ನೇ ಅದ್ಭುತ ಎಂದು ಬಣ್ಣಿಸಿದರು. 


ನಂತರ ಮಾತನಾಡಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸೋಲಾರ್ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವೇ ದೇಶದಲ್ಲಿ ಮುಂಚೂಣಿಯಲ್ಲಿದೆ. ಗುಜರಾತ್ 1585 ಮೆಗಾವಾಟ್, ಮಧ್ಯಪ್ರದೇಶ 1537 ಮೆಗಾವಾಟ್, ತಮಿಳು ನಾಡು 1822 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡುತ್ತಿವೆ. ತೆಲಂಗಾಣದಲ್ಲಿ 1000 ಮೆಗಾವಾಟ್ ಉತ್ಪಾದಿಸುತ್ತಿದೆ ಎಂದು ವಿವರಿಸಿದರು.


2013 ರಲ್ಲಿ 13 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ಈಗ 22000 ಮೆಗಾವಾಟ್ ಉತ್ಪಾದನೆ ಮಾಡುತ್ತಿದೆ. ಅನೇಕ ಸಮಸ್ಯೆ, ಸವಾಲುಗಳ ನಡುವೆಯೂ ವಿದ್ಯುತ್ ಸ್ವಾವಲಂಬನೆ ಸಾಧಿಸಿದೆ. ಈ ಸೋಲಾರ್ ಪಾರ್ಕ್ ಪ್ರದೇಶವಾದ ಶಕ್ತಿ ಸ್ಥಳವನ್ನು ಪ್ರವಾಸಿ ತಾಣವಾಗಿ ರೂಪಿಸಲಾಗುವುದು ಎಂದು ತಿಳಿಸಿದರು. 


ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.