ಗುಂಡ್ಲುಪೇಟೆ: ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಮೂರು ದಿನ ಸಂಚಾರವನ್ನು ನಿರ್ಬಂಧಿಸಲಾಗಿದೆ. 


COMMERCIAL BREAK
SCROLL TO CONTINUE READING

ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ‌ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ಡಾಂಬರೀಕರಣ ಮಾಡಿಸುವ ಉದ್ದೇಶದಿಂದ ಡಿ.18ರಿಂದ 20ರವರೆಗೆ ಮೂರು‌ ದಿನಗಳ ಕಾಲ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.


ಇದನ್ನೂ ಓದಿ- Ayodhya Water Metro: ಅಯೋಧ್ಯೆಯಲ್ಲಿ ಸಂಚರಿಸಲಿದೆ ವಾಟರ್ ಮೆಟ್ರೋ, ಇದಕ್ಕೆ ಸೌರಶಕ್ತಿಯೇ ಇಂಧನ


ಈ ಕುರಿತಂತೆ ಮಾಹಿತಿ ನೀಡಿರುವ  ತಹಸೀಲ್ದಾರ್ ಟಿ.ರಮೇಶ್ ಬಾಬು, ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ರಸ್ತೆ ಮಾರ್ಗದಲ್ಲಿ ಡಿ.18ರಿಂದ 20ರವರೆಗೆ ಮೂರು‌ ದಿನಗಳ ಕಾಲ ಡಾಂಬರೀಕರಣ ಕಾರ್ಯ ನಡೆಸಲು ಉದ್ದೇಶಿಸಲಾಗಿದೆ. ಈ ಹಿನ್ನಲೆಯಲ್ಲಿ ಈ ಮಾರ್ತದಲ್ಲಿ ವಾಹನ ಸಂಚಾರಕ್ಕೆ  ನಿರ್ಬಂಧ ಹೇರಿರುವ ಹಿನ್ನೆಲೆ ಭಕ್ತಾದಿಗಳು ಹಾಗೂ ಪ್ರವಾಸಿಗರು ಸಹಕಾರ ನೀಡಬೇಕೆಂದು ತಿಳಿಸಿದ್ದಾರೆ.


ಇದನ್ನೂ ಓದಿ- ಕೊಡೈಕೆನಾಲ್‌ ಪ್ರವಾಸಿಗರಿಗೆ ಮನಮೋಹಕ ಪರಿಸರ, ಬಜೆಟ್ ಸ್ನೇಹಿ ರೆಸಾರ್ಟ್‌ಗಳು


ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಿಂದ ಪ್ರತಿನಿತ್ಯ ಕೆ‌ಎಸ್‌ಆರ್‌ಟಿ‌ಸಿ ವತಿಯಿಂದ ಐದು ಬಸ್ ಗಳು ಸಂಚರಿಸುತ್ತವೆ. ವಾರಾಂತ್ಯ ಹಾಗೂ ವಿಶೇಷ ದಿನಗಳಲ್ಲಿ 20ಕ್ಕೂ ಅಧಿಕ ಬಸ್ ಗಳು ಸಂಚರಿಸುತ್ತಿದ್ದವು. ಜೊತೆಗೆ ಅರಣ್ಯ ಇಲಾಖೆ ವತಿಯಿಂದ ನಾಲ್ಕರಿಂದ ಐದು ಜೀಪ್ ಗಳನ್ನು‌ ಸಹ ಬಿಡಲಾಗಿತ್ತು. ಇದೀಗ ರಸ್ತೆ ಡಾಂಬರೀಕರಣ ಮಾಡುವ ಉದ್ದೇಶದಿಂದ ಎಲ್ಲಾ ವಾಹನಗಳಿಗೆ ನಿರ್ಬಂಧಿಸಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.