ಹಾಯ್ ಬೆಂಗಳೂರ್ ವಾರಪತ್ರಿಕೆ ಸಂಪಾದಕ- ಪತ್ರಕರ್ತ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್ ಸಂಪಾದಕ ಅನಿಲ್ ರಾಜ್ ಅವರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳುವಂತೆ ವಿಧಾನಸಭಾ ಸಚಿವಾಲಯದಿಂದ ಗೃಹ ಇಲಾಖೆಗೆ ಪತ್ರ ಕಳುಹಿಸಲಾಗಿದೆ. 


COMMERCIAL BREAK
SCROLL TO CONTINUE READING

ಈ ಹಿಂದೆ ಶಾಸಕರ ವಿರುದ್ಧ ಲೀಖನ ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಮತ್ತು  ಅನಿಲ್ ರಾಜ್ ಅವರಿಗೆ ವಿಧಾನ ಸಭೆ ಹಕ್ಕುಬಾಧ್ಯತಾ ಸಮಿತಿಯು ಒಂದು ವರ್ಷದ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಈ ನಡೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ, ಹಕ್ಕುಬಾಧ್ಯತಾ ಸಮಿತಿಯಲ್ಲಿ ಈ ಇಬ್ಬರೂ ಪತ್ರಕರ್ತರು ಅರ್ಜಿಯನ್ನು ಸಲ್ಲಿಸಿದ್ದರು. 


ಆದರೀಗ ಆ ಅರ್ಜಿಗಳನ್ನು ವಿಧಾನ ಸಭೆ ವಜಾಗೊಳಿಸುವ ಮೂಲಕ ಒಂದು ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದ ನಿರ್ಣಯವನ್ನು ಖಾಯಂಗೊಳಿಸಿದ್ದು, ಈ ನಿರ್ಣಯವನ್ನು ಈ ಕೂಡಲೇ ಅನುಷ್ಠಾನಕ್ಕೆ ತರುವಂತೆ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ. ಇದರೊಂದಿಗೆ ಹಾಯ್‌ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್‌ ಸಂಪಾದಕ ಅನಿಲ್‌ ರಾಜ್‌ಗೆ ಬಂಧನ ಭೀತಿ ಎದುರಾಗಿದೆ.