ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪಟ್ಟಿ ಬಿಡುಗಡೆ
224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆಗೆ ಒಂದು ವಾರದಿಂದ ಸಾಕಷ್ಟು ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವ ಕಾಂಗ್ರೆಸ್ ಪಕ್ಷ ಭಾನುವಾರ 224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಒಂದೇ ಸ್ಥಾನಕ್ಕೆ ಸೀಮಿತರಾದ ಸಿದ್ದರಾಮಯ್ಯ
ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಇನ್ನೊಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವಂತೆ ಹೈಕಮಾಂಡ್ ಸೂಚಿಸಿತ್ತು, ಆದರೆ ತಾವು ಒಂದೇ ಕ್ಷೇತ್ರದಲ್ಲಿ ಕಣಕ್ಕಿಳಿಯುವುದಾಗಿ ಸಿದ್ದರಾಮಯ್ಯನವರೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಬಾದಾಮಿ ಕ್ಷೇತ್ರದಲ್ಲಿ ಬೇರೆ ಅಭ್ಯರ್ಥಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಂಡ ಜೆಡಿಎಸ್ ಬಂಡಾಯ ಶಾಸಕರು
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ಮಾಡಿ, ನಂತರ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದ ಜಮೀರ್ ಅಹಮದ್ ಖಾನ್, ಎನ್. ಚೆಲುವರಾಯಸ್ವಾಮಿ, ಎಚ್.ಸಿ. ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ಭೀಮಾನಾಯ್ಕ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಅವರಿಗೆ ಟಿಕೆಟ್ ಲಭಿಸಿದೆ.
ನಾಯಕರ ಮಕ್ಕಳಿಗೆ ಟಿಕೆಟ್
ಈ ಬಾರಿಯ ಚುನಾವಣೆಯಲ್ಲಿ ಕೆಲವು ಶಾಸಕರು ಹಾಗೂ ಮಂತ್ರಿಗಳು ತಮ್ಮ ಮಕ್ಕಳಿಗೆ ರಾಜಕೀಯ ನೆಲೆ ಕಲ್ಪಿಸಲು ಮುಂದಾಗಿದ್ದರು. ಆದರೆ, ಕೆಲವರಿಗೆ ಮಾತ್ರ ಅವಕಾಶ ಲಭಿಸಿದೆ. ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ, ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ, ಕೆ.ಎಸ್. ಮುನಿಯಪ್ಪ ಪುತ್ರಿ ರೂಪಾ ಶಶಿಧರ್ ಹಾಗೂ ಜಯಚಂದ್ರ ಪುತ್ರ ಸಂತೋಷ್ ಗೆ ಟಿಕೆಟ್ ದೊರೆತಿದೆ. ಇನ್ನು ಪ್ರಿಯಾಂಕ್ ಖರ್ಗೆ, ಪ್ರಿಯ ಕೃಷ್ಣ, ಎಸ್.ಎಸ್.ಮಲ್ಲಿಕಾರ್ಜುನ್ ಈಗಾಲೇ ಶಾಸಕರಾಗಿದ್ದು, ಮರು ಆಯ್ಕೆಗೆ ಮತ್ತೆ ಟಿಕೆಟ್ ಖಾತ್ರಿಯಾಗಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಹೀಗಿದೆ: