ಬೆಂಗಳೂರು: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 24 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ. ನಾಮಪತ್ರ ಸಲ್ಲಿಕೆಗೆ ಚುನಾವಣಾ ಆಯೋಗ ಕೆಲ ಷರತ್ತುಗಳನ್ನು ವಿಧಿಸಿದ್ದು, ಅವುಗಳನ್ನು ಅಭ್ಯರ್ಥಿಗಳು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.


COMMERCIAL BREAK
SCROLL TO CONTINUE READING

ನಾಮಪತ್ರ ಸಲ್ಲಿಕೆಗೆ ಷರತ್ತುಗಳು: 


  • ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ.

  • ನಾಮಪತ್ರ ಸಲ್ಲಿಸಲು ಬರುವ ಅಭ್ಯರ್ಥಿಯ ಜೊತೆಯಲ್ಲಿ ಐವರು ಬೆಂಬಲಿಗರಿಗೆ ಅವಕಾಶ.

  • ನಾಮಪತ್ರ ಸಲ್ಲಿಸಲು ಒಬ್ಬ ಅಭ್ಯರ್ಥಿ ಕೇವಲ ಮೂರು ವಾಹನಗಳ ಜೊತೆ ಮಾತ್ರ ಬರಬೇಕು.

  • ನಾಮಪತ್ರ ಸಲ್ಲಿಸುವವರು ಬೇರೆ ಕ್ಷೇತ್ರದ ಅಭ್ಯರ್ಥಿ ಆಗಿದ್ದರೆ, ಎರಡು ರೀತಿಯ ಅಫಿಡವಿಟ್ ಸಲ್ಲಿಸಬೇಕು.

  • ಅರ್ಜಿಯಲ್ಲಿ ಎಲ್ಲಾ ಮಾಹಿತಿ ನೀಡುವುದು ಕಡ್ಡಾಯ. ಇಲ್ಲದಿದ್ದರೆ ನಾಮಪತ್ರ ತಿರಸ್ಕೃತಗೊಳ್ಳುತ್ತದೆ.

  • ನಾಮಪತ್ರ ಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳು ಐದು ಸಾವಿರ ಹಣ ಠೇವಣಿ ಇಡಬೇಕು.

  • ಇತರೆ ವರ್ಗದ ಅಭ್ಯರ್ಥಿಗಳು ಕಡ್ಡಾಯವಾಗಿ ಹತ್ತು ಸಾವಿರ ಡೆಪಾಸಿಟ್ ಹಣ ಕಟ್ಟಬೇಕು.

  • ಅಭ್ಯರ್ಥಿಗಳು ಹೊಸ ಬ್ಯಾಂಕ್ ಅಕೌಂಟ್ ತೆರೆದು, ಅಲ್ಲಿಂದಲೇ ಹಣ ಖರ್ಚು ಮಾಡಬೇಕು.