ವಿಧಾನಸಭಾ ಚುನಾವಣೆ: ಇಂದು ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ

ಇಂದು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಂತಿಮ ಮಾಡುವ ಸಾಧ್ಯತೆ ಇದೆ.  

Last Updated : Apr 16, 2018, 09:02 AM IST
ವಿಧಾನಸಭಾ ಚುನಾವಣೆ: ಇಂದು ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ title=

ನವದೆಹಲಿ: ವಿಧಾನಸಭೆ ಚುನಾವಣೆಗೆ ಕಳೆದ ವಾರ 72 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಇಂದು ತನ್ನ ಎರಡನೇ ಪಟ್ಟಿ ಪ್ರಕಟಿಸಲಿದೆ.

ಏಪ್ರಿಲ್15 (ಭಾನುವಾರ) ರಂದೇ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ಬಿಜೆಪಿ, ನಿನ್ನೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಹಿನ್ನೆಲೆಯಲ್ಲಿ ತನ್ನ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಲು ನಿರ್ಧರಿಸಿದೆ. ಈ ಸಂಬಂಧ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಜಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನವದೆಹಲಿಯಲ್ಲಿ ಭಾನುವಾರ ರಾತ್ರಿ ಚರ್ಚೆ ನಡೆಸಿದ್ದಾರೆ.

ಇನ್ನೂ ಎರಡು ಹಂತದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮಾಡಲು ನಿರ್ಧರಿಸಿತ್ತು. ಆದರೆ ಕಾಂಗ್ರೆಸ್ ಒಂದೇ ಹಂತದಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಎರಡನೇ ಹಂತದಲ್ಲಿ ಎಲ್ಲಾ ಅಭ್ಯರ್ಥಿಗಳ ಆಯ್ಕೆ ಮಾಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಂತಿಮ ಮಾಡುವ ಸಾಧ್ಯತೆ ಇದೆ. ಅದರ ಜೊತೆಗೆ ಎಲ್ಲೆಲ್ಲಿ ಕಾಂಗ್ರೆಸ್ ಪ್ರಮುಖ ಅಭ್ಯರ್ಥಿಗಳಿದ್ದಾರೋ, ಅಲ್ಲಿ ಪ್ರಬಲ ಪ್ರತಿಸ್ವರ್ಧಿ ನಿಲ್ಲಿಸುವ ಬಗ್ಗೆ ಚರ್ಚೆ ನಡೆಯಲಿದೆ.

Trending News