ಬೆಂಗಳೂರು: ಬರೊಬ್ಬರಿ 20 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿಯನ್ನು ಬುಧವಾರ(ನ.16) ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನ ಜೆ.ಪಿ.ನಗರದ 8ನೇ ಹಂತ 2ನೇ ಬ್ಲಾಕ್ ಕೊತ್ತನೂರ್ ವ್ಯಾಪ್ತಿಯ ಸರ್ವೇ ನಂಬರ್ 21/3ರ 1 ಎಕರೆ 8 ಗುಂಟೆ ಜಾಗವನ್ನು ಇಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಅತಿಕ್ರಮಣಕಾರರಿಂದ ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರೆಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಇಂದು 20 ಕೋಟಿ ರೂ.ಗಿಂತಲೂ ಹೆಚ್ಚಿನ ಮೌಲ್ಯದ ಆಸ್ತಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.


ಇದನ್ನೂ ಓದಿ: ರಸ್ತೆಗುಂಡಿಗೆ ಯೋಧ ಬಲಿ: ಪ್ರತಿಭಟನೆ ನಡೆಸಿದ ಎಎಪಿ ಮುಖಂಡರ ಬಂಧನ


ಬಿಡಿಎ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್ ಮಾರ್ಗದರ್ಶನ ಹಾಗೂ ಆಯುಕ್ತರಾದ ಕುಮಾರ್ ನಾಯಕ್ ಆದೇಶದಂತೆ ಜೆ.ಪಿ.ನಗರದ 8ನೇ ಹಂತ 2ನೇ ಬ್ಲಾಕ್ ಕೊತ್ತನೂರ್ ವ್ಯಾಪ್ತಿಯ ಸರ್ವೇ ನಂಬರ್ 21/3ರ 1 ಎಕರೆ 8 ಗುಂಟೆ ಜಾಗವನ್ನು ವಶಕ್ಕೆ ಪಡೆಯಲಾಗಿದೆ.


ಇಂದು ವಶಪಡಿಸಿಕೊಂಡ ಜಾಗದಲ್ಲಿ ಅತಿಕ್ರಮವಾಗಿ ನಿರ್ಮಾಣ ಮಾಡಿದ್ದ 4 ಶೆಡ್‍ಗಳನ್ನು ಹಾಗೂ ನಿರ್ಮಾಣ ಹಂತದಲ್ಲಿದ್ದ ಒಂದು ಕಟ್ಟಡವನ್ನು ಬಿಡಿಎ ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನೆಲಸಮಗೊಳಿಸಿ ವಶಕ್ಕೆ ಪಡೆಯಲಾಯಿತು.


ಇದನ್ನೂ ಓದಿ: ಸಿದ್ದರಾಮಯ್ಯ ಮೊದಲು ಡಿಕೆಶಿ ಅವರ ಬೆಂಬಲ ಪಡೆಯಲಿ: ಸಿಎಂ ಬೊಮ್ಮಾಯಿ


ಈ ಸಂದರ್ಭದಲ್ಲಿ ಬಿಡಿಎ ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿ ನಂಜುಂಡೇಗೌಡ, ಇನ್ಸೆಪೆಕ್ಟರ್ ಶ್ರೀನೀವಾಸ್, ಅಭಿಯಂತರ ಅಧಿಕಾರಿ ಮಲ್ಲಿಕಾರ್ಜುನ್ ಸ್ವಾಮಿ, ಇಂಜಿನಿಯರ್‍ಗಳಾದ ಸುರೇಶ್ ಮತ್ತು ಅಶೋಕ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.