ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ- ಮಾಜಿ ಸಿಎಂ ಸಿದ್ದರಾಮಯ್ಯ
ಕುಮಾರಸ್ವಾಮಿ ಸಿಎಂಗಾದಿ 30 ತಿಂಗಳಿಗೋ/5 ವರ್ಷಕ್ಕೋ?
ನವದೆಹಲಿ: ರಾಹುಲ್ ಗಾಂಧಿ ವಿದೇಶ ಪ್ರವಾಸದ ಹಿನ್ನಲೆಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ನಿಗದಿಯಾಗಿದ್ದ ಸಭೆ ರದ್ದಾಗಿದ್ದು, ಸದ್ಯಕ್ಕೆ ಸಚಿವ ಸಂಪುಟ ರಚನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಾರದ ಮಟ್ಟಿಗೆ ಸಂಪುಟ ರಚನೆಯ ಕಸರತ್ತನ್ನು ಮುಂದೂಡಲಾಗಿದ್ದು, ಈ ಬಗ್ಗೆ ಮುಂದಿನವಾರ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.
ಇಂದಿನ ರಾಹುಲ್ ಗಾಂಧಿ ಸಭೆ ರದ್ದಾದ ಬಗ್ಗೆಯೂ ಮಾಹಿತಿ ನೀಡಿದ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುತ್ತಾರೆ. ಅಗತ್ಯ ಬಿದ್ದರೆ ನಾನು ಕೂಡ ಕುಮಾರಸ್ವಾಮಿ ಜೊತೆ ಚರ್ಚಿಸುತ್ತೇನೆ ಎಂದು ಹೇಳಿದರು.
ಕುಮಾರಸ್ವಾಮಿ ಸಿಎಂಗಾದಿ 30 ತಿಂಗಳಿಗೋ/5 ವರ್ಷಕ್ಕೋ?
ಕುಮಾರಸ್ವಾಮಿ ಸಿಎಂಗಾದಿ 30 ತಿಂಗಳಿಗೋ/5 ವರ್ಷಕ್ಕೋ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನದ ಅವಧಿ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.