ಪ್ಲಾಸ್ಟಿಕ್ ತಯಾರಿಕಾ ಕಂಪನಿಗಳ ಮೇಲೆ ದಾಳಿ, 11 ಟನ್ ನಿಷೇಧಿತ ಪ್ಲಾಸ್ಟಿಕ್ ವಶ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಲಬುರಗಿ ಪ್ರಾದೇಶಿಕ ಕಚೇರಿಯ ಅಧಿಕಾರಿಗಳ ತಂಡ ಶುಕ್ರವಾರ ಕಲಬುರಗಿ ಹೊರವಲಯದ ಕಪನೂರ ಕೈಗಾರಿಕಾ ಪ್ರದೇಶದಲ್ಲಿ ಎರಡು ಪ್ಲಾಸ್ಟಿಕ್ ತಯಾರಿಕೆ ಘಟಕಗಳ ಮೇಲೆ ದಾಳಿ ಮಾಡಿ 11 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.
ಕಲಬುರಗಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಲಬುರಗಿ ಪ್ರಾದೇಶಿಕ ಕಚೇರಿಯ ಅಧಿಕಾರಿಗಳ ತಂಡ ಶುಕ್ರವಾರ ಕಲಬುರಗಿ ಹೊರವಲಯದ ಕಪನೂರ ಕೈಗಾರಿಕಾ ಪ್ರದೇಶದಲ್ಲಿ ಎರಡು ಪ್ಲಾಸ್ಟಿಕ್ ತಯಾರಿಕೆ ಘಟಕಗಳ ಮೇಲೆ ದಾಳಿ ಮಾಡಿ 11 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.
ಕಪನೂರ ಪ್ರದೇಶದ 2ನೇ ಹಂತದಲ್ಲಿನ ಮೊಹಮ್ಮದ್ ಗೌಸ್ ತಂದೆ ಮೊಹಮ್ಮದ್ ವಲಿಯುದ್ದಿನ್ ಇವರ ಘಟಕದಿಂದ 6 ಟನ್ ಮತ್ತು ರಘುನಾಥ ಮೆಹ್ತಾ ಮತ್ತು ಇಪ್ತೆಖಾರ ತಂದೆ ಯೂಸುಫ್ ಅಲಿ ಪ್ಲಾಟ್ ನಂ.210 ಇವರ ಘಟಕದಿಂದ 5 ಟನ್ ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಪ್ಲಾಸ್ಟಿಕ್ ಗಳನ್ನು ಚಿತ್ತಾಪೂರ ತಾಲೂಕಿನ ಮೊಗಲಾ ಗ್ರಾಮದ ಮೆ.ಓರಿಯಂಟಲ್ ಸಿಮೆಂಟ್ ಲಿ. ಕಂಪನಿಗೆ ಕೋ-ಪ್ರೊಸೆಸಿಂಗ್ ಗೆ ಕಳುಹಿಸಲಾಗಿದೆ.
ಕ್ರಿಮಿನಲ್ ಕೇಸ್ ದಾಖಲಿಸಲು ಕ್ರಮ:
ಪರಿಸರ ಸಂರಕ್ಷಣೆ ಕಾಯ್ದೆ ಉಲ್ಲಂಘಿಸಿ ಪ್ಲಾಸ್ಟಿಕ್ ತಯಾರಿಕೆಯಲ್ಲಿ ತೊಡಗಿದ್ದ ಈ ಎರಡು ಘಟಕಗಳ ಮೇಲೆ ಪರಿಸರ ಸಂರಕ್ಷಣಾ ಕಾಯ್ದೆ-1986ರಡಿಯಲ್ಲಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಕ್ರಮ ವಹಿಸಲಾಗಿದೆ ಎಂದು ಪ್ರಾಂತಿಯ ಕಚೇರಿಯ ಪರಿಸರ ಅಧಿಕಾರಿ ಸಿ.ಎನ್.ಮಂಜಪ್ಪ ತಿಳಿಸಿದ್ದಾರೆ.
ದಾಳೆ ವೇಳೆಯಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಲಬುರಗಿ ಪ್ರಾದೇಶಿಕ ಕಚೇರಿಯ ಉಪ ಪರಿಸರ ಅಧಿಕಾರಿ ಆದಮ್ ಸಾಬ್ ಸೇರಿದಂತೆ ಇನ್ನಿತರ ಸಿಬ್ಬಂದಿಗಳು ಇದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.