ಬಳ್ಳಾರಿ: ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕುರುಗೋಡು ಪಟ್ಟಣದಲ್ಲಿ ವಿವಿಧೆಡೆ ದಾಳಿ ನಡೆಸಿ ಇಬ್ಬರು ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಅವರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಚೈಲ್ಡ್‍ಲೈನ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇದ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ಸಭೆಯನ್ನು ನಡೆಸಿ ಈ ಕಾರ್ಯಚಾರಣೆ ಮಾಡಲಾಗಿದೆ.


ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಳ್ಳಲು ಇದೇ ಪ್ರಮುಖ ಕಾರಣವೇ! 


ಪಟ್ಟಣದ ಬಳ್ಳಾರಿ ರಸ್ತೆ, ವದ್ದಟ್ಟಿ ರಸ್ತೆ ಮತ್ತು ಪಟ್ಟಣದಲ್ಲಿರುವ ಮಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ, ಇಟ್ಟಂಗಿ ಭಟ್ಟಿ, ಗುಜರಿ ಶಾಪ್ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ಮಾಡಿ 02 ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿ ತರಲು ಸಂಬಂಧಿಸಿದ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಕುರುಗೋಡು ಗ್ರೇಡ್-2 ತಹಶೀಲ್ದಾರ ಮಲ್ಲೇಶಪ್ಪ, ಕಾರ್ಮಿಕ ನಿರೀಕ್ಷಕ ರವಿದಾಸ್, ಕುರುಗೋಡು ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಯುವರಾಜ್, ಕಂದಾಯ ನಿರೀಕ್ಷಕ ಬಿ.ಮಲ್ಲಿಕಾರ್ಜುನ, ಶಿಕ್ಷಣ ಇಲಾಖೆಯ ಷಣ್ಮುಖಪ್ಪ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಮಲ್ಲೇಶಪ್ಪ, ಚೈಲ್ಡ್‍ಲೈನ್ ಸಿಬ್ಬಂದಿ ಚಂದ್ರಕಳ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.