)
ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಪ್ರಯತ್ನ ಮಾಡಿದ್ದಾರೆ ಎಂದು ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ ಹೊಸ ಬಾಂಬ್ ಸಿಡಿಸಿದ್ದಾರೆ.ಅರವಿಂದ್ ಬೆಲ್ಲದ ಹುಬ್ಬಳ್ಳಿಯಲ್ಲಿ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಶ್ರೀಗಳ ಆರೋಗ್ಯ ಹದಗೆಟ್ಟಿದೆ. ಅವರಿಗೆ ಫುಡ್ ಪಾಯಿಸನ್ ಆಗಿದೆ ಎನ್ನುವ ವಿಚಾರ ಗೊತ್ತಿತ್ತು. ಆದರೆ, ಫುಡ್ ಪಾಯಿಸನ್ ಆಗಿರುವುದಕ್ಕೆ ಕಾರಣ ಬೇರೆಯಿದೆ ಎಂದು ಹೇಳಿದ್ದಾರೆ. ಅರವಿಂದ ಬೆಲ್ಲದ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಕೂಡಲ ಸಂಗಮ ಮಠದ ಹೊರಗಡೆ ಇಬ್ಬರು ಮುಸ್ಲಿಂ ಸಮಾಜದ ಹುಡುಗರು ಇದ್ದಾರೆ.ಆ ಇಬ್ಬರು ಮಠಕ್ಕೆ ಯಾರು ಬರುತ್ತಾರೆ ? ಯಾರು ಹೋಗತ್ತಾರೆ ಎನ್ನುವ ಮಾಹಿತಿ ಸಂಗ್ರಹ ಮಾಡುತ್ತಿರುತ್ತಾರೆ. ವಿಡಿಯೋ ಸಹ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರವನ್ನು ಮಠದ ಭಕ್ತರು ನನಗೆ ಹೇಳಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಅದೇ ಮುಸ್ಲಿಂ ಯುವಕರು ಅಡುಗೆ ಮನೆಗೆ ಹೋಗಿದ್ದರು.ಈ ಬಗ್ಗೆ ಸ್ಥಳೀಯ ಭಕ್ತರು ಯುವಕರನ್ನು ವಿಚಾರಣೆ ಮಾಡಿದ್ದಾರೆ. ಆ ಯುವಕರು ಅಡುಗೆ ಮನೆಗೆ ಹೋಗಿ ಬಂದ ಕೆಲವೇ ಹೊತ್ತಿನಲ್ಲಿ ಶ್ರೀಗಳ ಆರೋಗ್ಯ ಹದಗೆಟ್ಟಿದೆ. ಶ್ರೀಗಳು ಈ ಬಗ್ಗೆ ನನಗೆ ಮುಂದೆ ಹೇಳಿಕೊಂಡಿದ್ದಾರೆ ಎಂದಿದ್ದಾರೆ. ತಮಗೆ ವಿಷ ಪ್ರಾಶನ ಆಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.
ಊಟದಲ್ಲಿ ಏನೋ ಹೆಚ್ಚು ಕಡಿಮೆ ಮಾಡಲಾಗಿದೆ ಎಂದು ಸ್ವಾಮೀಜಿ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಬೆಲ್ಲದ ಆರೋಪಿಸಿದ್ದಾರೆ. ಈ ಕೆಟ್ಟ ಕೆಲಸಕ್ಕೆ ತಕ್ಕ ಶಿಕ್ಷೆ ಸಮಾಜ ನೀಡುತ್ತದೆ ಎಂದು ಗುಡುಗಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.