ಕಲಬುರ್ಗಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಂಡಾವೊಂದರಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಚಾಕಲೇಟ್ ಆಸೆ ತೋರಿಸಿ ಬಾಲಕಿಯನ್ನ ತೊಗರಿ ಹೊಲದೊಳಗೆ ಕರೆದೊಯ್ದಿದ್ದ ಕಾಮುಕ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.ಈ ಸಂದರ್ಭದಲ್ಲಿ ಬಾಲಕಿ ಕಿರುಚಾಡುವುದನ್ನು ಕಂಡು ಅಕ್ಕಪಕ್ಕದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಜನರು ಆಗಮಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.


ಇದನ್ನೂ ಓದಿ : BESCOM : ದುಸ್ಥಿಯಲ್ಲಿದ್ದ 1 ಲಕ್ಷಕ್ಕೂ ಅಧಿಕ ಟ್ರಾನ್ಸ್‌ ಫಾರ್ಮರ್‌ ರಿಪೇರಿ ಮಾಡಿದ ಬೆಸ್ಕಾಂ


ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನುಅದೇ ತಾಂಡಾದ ಕುಮಾರ್ ತಾನು ಜಾದವ್ ಎನ್ನಲಾಗಿದೆ. ಅತ್ಯಾಚಾರದ ವೇಳೆ ರೆಡ್‌ಹ್ಯಾ‌ಂಡ್ ಆಗಿ ಕಾಮುಕ ಕುಮಾರ ಜಾಧವ್‌ನನ್ನು ನೆಲಕ್ಕೆ ಹಾಕಿ ಜನರು ಥಳಿಸಿದ್ದಾರೆ.


ಇದನ್ನೂ ಓದಿ : ಟೀಚರ್ ನೇಮಕಾತಿ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕ್...!


ತದನಂತರ ವಾಡಿ ಠಾಣೆಯ ಪೊಲೀಸರಿಗೆ ಕಾಮುನನ್ನು ಹಸ್ತಾಂತರಿಸಲಾಗಿದ್ದು ಈಗ ಪೋಲಿಸರು ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.